ಫ್ಯಾಕ್ಟ್‌ಚೆಕ್: ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ವಾಹನಗಳು ಕೊಚ್ಚಿಹೋಗಿವೆ ಎಂದು ಎಐ ವಿಡಿಯೋ ಹಂಚಿಕೆ
ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ವಾಹನಗಳು ಕೊಚ್ಚಿಹೋಗಿವೆ ಎಂದು ಎಐ ವಿಡಿಯೋ ಹಂಚಿಕೆ
ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ವಿಪರೀತ ಮಳೆಗೆ ಜನರು ಕಂಗೆಟ್ಟಿದ್ದಾರೆ. ರಸ್ತೆಗಳಿಂದ ಹಿಡಿದು ವಿಮಾನ ನಿಲ್ದಾಣದವರೆಗೆ ಎಲ್ಲೆಡೆ ನೀರು ನಿಂತಿತ್ತು. ಕೆಟ್ಟ ಹವಾಮಾನದಿಂದಾಗಿ ಅನೇಕ ವಿಮಾನಗಳಲ್ಲಿ ಮಾರ್ಗ ಬದಲಾವಣೆಯಾಗಿತ್ತು. ಈ ಮಳೆ ದೆಹಲಿಯ ಜನರಿಗೆ ಬಿಸಿಲಿನ ಬೇಗೆಯಿಂದ ಪರಿಹಾರ ನೀಡಿದ್ದರೂ, ಅನೇಕ ಪ್ರದೇಶಗಳಲ್ಲಿ ಸಮಸ್ಯೆಗೆ ಕಾರಣವಾಗಿದೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ದೆಹಲಿಯಲ್ಲಿ ಭಾರಿ ಮಳೆಯಿಂದಾಗಿ ಫ್ಲೈಓವರ್ ಅಡಿಯಲ್ಲಿ ನೀರು ನುಗ್ಗಿ ಹಲವಾರು ರಸ್ತೆಗಳಲ್ಲಿದ್ದ ವಾಹನಗಳು ಕೊಚ್ಚಿಹೊಗುವುದನ್ನು ನೋಡಬಹುದು. ಕೆಲವು ಬಳಕೆದಾರರು ಈ ವೀಡಿಯೊ ದೆಹಲಿಯದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ.
ಜುಲೈ 04, 2025ರಂದು ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ವೈರಲ್ ಆದ ವಿಡಿಯೋವನ್ನು ಹಂಚಿಕೊಂಡು ʼಫ್ಲೈಓವರ್ ಅಡಿಯಲ್ಲಿ ಹರಿಯುವ ನೀರಿನಿಂದ ಹಲವಾರು ವಾಹನಗಳು ಕೊಚ್ಚಿ ಹೋಗುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದು, ಈ ಘಟನೆ ದೆಹಲಿಯಲ್ಲಿ ನಡೆದಿದೆʼ ಎಂದು ಹೇಳಿಕೊಂಡಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ʼदिल्ली में रोड पर अचानक आया पानीʼ ಕ್ಯಾಪ್ಷನ್ ನೀಡಿರುವುದನ್ನು ನೋಡಬಹುದು. ಕ್ಯಾಪ್ಷನ್‌ನ್ನು ಕನ್ನಡಕ್ಕೆ ಅನುವಾದಿಸಿದಾಗ ʼದೆಹಲಿಯಲ್ಲಿ ರಸ್ತೆಗೆ ಇದ್ದಕ್ಕಿದ್ದಂತೆ ನೀರು ಬಂತುʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಮತ್ತೊಂದು ಫೇಸ್‌ಬುಕ್ ಖಾತೆದಾರರೊಬ್ಬರು ಜುಲೈ 19, 2025ರಂದು ತಮ್ಮ ಖಾತೆಯಲ್ಲಿ ʼदिल्ली रोड पर अचानक आया पानी ʼ ಎಂಬ ಶಿರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ವೈರಲ್ ಆದ ಪೊಸ್ಟ್‌ನ್ನು ನೀವಿಲ್ಲಿ ನೋಡಬಹುದು.
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋದಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ಸುದ್ದಿಯ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವೈರಲ್ ವಿಡಿಯೋವಿನ ಕೆಲವು ಪ್ರಮುಖ ಕೀಫ್ರೇಮ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು ಹುಡುಕಾಟದಲ್ಲಿ ನಮಗೆ ಯಾವುದೇ ವರದಿಗಳು ಕಂಡುಬಂದಿಲ್ಲ. ಹುಡುಕಾಟದಲ್ಲಿ ನಮಗೆ, ಇದೇ ವಿಡಿಯೋವನ್ನು ಸಾಕಷ್ಟು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿರುವುದನ್ನು ನಾವು ಕಂಡುಕೊಂಡೆವು. ನಂತರ ನಾವು ಗೂಗಲ್‌ನಲ್ಲಿ ವಿವಿಧ ಕೀವರ್ಡ್‌ಗಳ ಮೂಲಕ ಹುಡುಕಾಟ ನಡೆಸಿದೆವು ʼದೆಹಲಿಯಲ್ಲಿ ರಸ್ತೆಗಳಲ್ಲಿ ವಾಹನಗಳು ಕೊಚ್ಚಿಹೊಗಿವೆಯಾʼ ಎಂಬ ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ಸಿಗಲಿಲ್ಲ. ನಮಗೆ ಘಟನೆಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳನ್ನು ಸಿಗಲಿಲ್ಲ. ಒಂದು ವೇಳೆ ಅಪಘಾತ ಸಂಭವಿಸಿದ್ದರೆ, ಮಾಧ್ಯಮಗಳಲ್ಲಿ ಅಥವಾ ಪತ್ರಿಕೆಗಳಲ್ಲಿ ಈ ವಿಷಯದ ಕುರಿತು ವರದಿಯಾಗುತ್ತಿತ್ತು.
ನಂತರ ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳು ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು. ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್́ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ ಚಿತ್ರ 1ಕ್ಕೆ 96% ಶಾತದಷ್ಟು ಚಿತ್ರ 2ಕ್ಕೆ 97% ಶತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಈ ಮಾಹಿತಿಯನ್ನು ಮತ್ತಷ್ಟು ಖಚಿತ ಪಡಿಸಿಕೊಳ್ಳಲು ನಾವು ಎಐ ಇಮೇಜ್ ಡಿಟೆಕ್ಷನ್ ಟೂಲ್ ʼಹೈವ್ ಮಾಡರೇಶನ್ʼ ನಲ್ಲಿ ಫೊಟೋವನ್ನು ಪರಿಶೀಲಿಸಿದೆವು. ಪರಿಶೀಲನೆಯಲ್ಲಿ ನಮಗೆ ಈ ಚಿತ್ರ 1ಕ್ಕೆ 99.9%, ಚಿತ್ರ 2ಕ್ಕೆ 97.6% ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ತಿಳಿದುಬಂದಿತು.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.