ಫ್ಯಾಕ್ಟ್‌ಚೆಕ್‌: ಅಯೋಧ್ಯೆಯಲ್ಲಿ ಧ್ವಜಾರೋಹಣದ ನಂತರ ಮಂಗ ಬಂದಿದೆ ಎಂದು ಎಐ ಚಿತ್ರ ಹಂಚಿಕೆ

ಅಯೋಧ್ಯೆಯಲ್ಲಿ ಧ್ವಜಾರೋಹಣದ ನಂತರ ಮಂಗ ಬಂದಿದೆ ಎಂದು ಎಐ ಚಿತ್ರ ಹಂಚಿಕೆ

Update: 2025-12-12 10:23 GMT

ನವಂಬರ್‌ 25, 2025ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿತು. ಅಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದರು. ಶ್ರೀರಾಮ ಮತ್ತು ಸೀತಾ ಮಾತೆಯ ದೈವಿಕ ವಿವಾಹವನ್ನು ಆಚರಿಸುವ ವಿವಾಹ ಪಂಚಮಿಯ ಸಂದರ್ಭದಲ್ಲಿ ಅಯೋಧ್ಯೆ ಪೂರ್ಣ ವೈಭವದಿಂದ ಹೊಳೆಯುತ್ತಿತ್ತು. ಇದರ ನಡುವೆ ಸಾಮಾಝಿಕ ಜಾಲತಾಣದಲ್ಲಿ ಅಯೋಧ್ಯೆಯಲ್ಲಿ ಧ್ವಜಾರೋಹಣೆ ಮಾಡಿದ ನಂತರ ಕಪಿಯೊಂದು ಅಲ್ಲಿಗೆ ಬಂದಿದೆ ಎಂಬಂತೆ ಪೋಸ್ಟ್ ವೈರಲ್ ಆಗುತ್ತಿದೆ.

ಡಿಸಂಬರ್‌ 02, 2025ರಂದು ಯೂಟ್ಯೂಬ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼರಾಮಾಯಣ ಕಾಲ್ಪನಿಕ ಅನ್ನೋ ಗುಲಾಮರೇ ಇತ್ತ ನೋಡಿ ಒಮ್ಮೆʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋವಿಗೆ ಕ್ಯಾಪ್ಷನ್‌ ಆಗಿ ʼರಾಮಾಯಣ ಕಾಲ್ಪನಿಕ ಅನ್ನೋ ಗುಲಾಮನೆ ಒಂದು ಸಾರಿ ಇಲ್ಲಿ ನೋಡಿ ಪ್ರಭು ಶ್ರೀರಾಮರ ಸೇವೆಗೆ ಸದಾ ಸಿದ್ದನಿರುತ್ತಾನೆಂದು, ಸಾರಿ ಸಾರಿ ಹೇಳುವ ಮಾರುತಿ ಈ ದಿನದ ಹನುಮ ಜಯಂತಿಯʼ ಎಂದು ಬರೆದಿರುವುದನ್ನು ನೋಡಬಹುದು

Full View

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ಡಿಸಂಬರ್‌ 01, 2025ರಂದು ಫೇಸ್‌ಬುಕ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಶನಿವಾರದ ದೃಶ್ಯ. ಅಯೋಧ್ಯೆಯ ರಾಮ ಮಂದಿರದ ಧರ್ಮ ಧ್ವಜದ ಮೇಲೆ ಕಪೀಶ. ಜಯ ಕಪೀಶ ತಿಹು ಲೋಕ ಉಜಾಗರ ರಾಮದೂತ ಅತುಲಿತ ಬಲಧಾಮʼ ಎಂದು ಬರೆದು ಅಯೋಧ್ಯೆಯ ಕೆಲವು ಚಿತ್ರಗಳ ಜೊತೆಗೆ ವೈರಲ್‌ ಆದ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.

Full View

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ಡಿಸಂಬರ್‌ 01, 2025ರಂದು ಇನ್‌ಸ್ಟಾಗ್ರಾಮ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼఅయోధ్య రాముడి జెండా వద్ద అద్భుత దృశ్యంʼ ಎಂದು ತೆಲುಗಿನಲ್ಲಿ ಶೀರ್ಷಿಕೆಯೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ನವಂಬರ್‌ 30, 2025ರಂದು ಯೂಟ್ಯೂಬ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ "AYODHYA ME DHWAJA CHADHA. AUR UPAR SE HANUMAN JI NE KAHA-UMAN JI NE MAIN YAHIN HOON" ಎಂದು ಬರೆದಿರುವುದನ್ನು ಕಾಣಬಹುದು. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼ"ಅಯೋಧ್ಯೆಯಲ್ಲಿ ಧ್ವಜ ಹಾರಿಸಲಾಯಿತು.ಮೇಲಿನಿಂದ, ಹನುಮಾನ್ ಜಿ ಹೇಳಿದರು - "ನಾನು ಇಲ್ಲೇ ಇದ್ದೇನೆ ಎಂದು!" ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡದ್ದಾರೆ.

Full View

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು


ಮತ್ತಷ್ಟು ವೈರಲ್‌ ಆದ ಪೋಸ್ಟ್‌ಗಳನ್ನು ನೀವಿಲ್ಲಿ, ಇಲ್ಲಿ ನೋಡಬಹುದು

ಫ್ಯಾಕ್ಟ್‌ಚೆಕ್‌

ವೈರಲ್‌ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ವಾಸ್ತವವಾಗಿ ಅಯೋಧ್ಯೆಯಲ್ಲಿ ಧ್ವಜಾರೋಹಣದ ನಂತರ ಕಪಿ ಬಂದಿದೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ ವೈರಲ್‌ ಆದ ಚಿತ್ರವನ್ನು ಎಐ ಬಳಸಿ ರಚಿಸಲಾಗಿದೆ̤

ನಾವು ವೈರಲ್‌ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಲನ್ನು ಉಪಯೋಗಿಸಿ ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್‌ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಇಲ್ಲಿಯೂ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ.

ವೈರಲ್‌ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್‌ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್‌ ಮೋಷನ್‌ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ನಾವು ಫೋಟೋ ವನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಇದರಲ್ಲಿ ಕಪಿಯ ಆಕೃತಿ, ಫೋಟೋ ಬಣ್ಣವು ಸಹಜವಾಗಿಲ್ಲದ ರೀತಿ ಇರುವುದನ್ನು ಗುರುತಿಸಿದ್ದೇವೆ. ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.

ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್‌ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಸೈಟ್‌ ಇಂಜಿನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋ 97% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಹೈವ್‌ ಮಾಡರೇಶನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼವಾಸ್‌ ಇಟ್‌ ಎಐʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್‌ ಆದ ಪೊಸ್ಟ್‌ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

Claim :  ಅಯೋಧ್ಯೆಯಲ್ಲಿ ಧ್ವಜಾರೋಹಣದ ನಂತರ ಮಂಗ ಬಂದಿದೆ ಎಂದು ಎಐ ಚಿತ್ರ ಹಂಚಿಕೆ
Claimed By :  Social Media Users
Fact Check :  Unknown
Tags:    

Similar News