ಫ್ಯಾಕ್ಟ್‌ಚೆಕ್‌: ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯೊಂದು ಕುಸಿದಿದೆ ಎಂದು ಎಐ ವಿಡಿಯೋ ಹಂಚಿಕೆ

ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯೊಂದು ಕುಸಿದಿದೆ ಎಂದು ಎಐ ವಿಡಿಯೋ ಹಂಚಿಕೆ

Update: 2026-02-21 03:30 GMT

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸೇತುವೆಯೊಂದು ಕುಸಿದು ಬೀಳುತ್ತಿರುವ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋದಲ್ಲಿ ಏನಿದೆಯೆಂದರೆ, ಪರ್ವತ ಪ್ರದೇಶದ ಮಧ್ಯೆ ಹರಿಯುತ್ತಿರುವ ನದಿಯ ಮೇಲೆ ನಿರ್ಮಿಸಲಾದ ಸೇತುವೆ ಮೇಲೆ ಸಂಚರಿಸುತ್ತಿದ್ದ ವಾಹನಗಳ ಜೊತೆಗೆ, ಎರಡೂ ಬದಿಗಳಲ್ಲಿ ಪಾದಚಾರಿಗಳು ಭಾರೀ ಮಳೆಯ ಪರಿಣಾಮವಾಗಿ ತುಂಬಿ ಹರಿಯುತ್ತಿದ್ದ ನದಿಯನ್ನು ನೋಡುವುದನ್ನು ಕಾಣಿಬಹುದು. ನೋಡ ನೋಡುತ್ತಿದ್ದಂತೆ ಸೇತುವೆಯ ಒಂದು ಭಾಗ ಏಕಾಏಕಿ ಕುಸಿದು ಬೀಳುತ್ತದೆ. ರಸ್ತೆ ಮೇಲ್ಮೈ ಬಿರುಕು ಬಿಟ್ಟು ಕುಸಿಯುತ್ತದೆ. ಪ್ರವಾಹದ ಒತ್ತಡಕ್ಕೆ ಗಾರ್ಡ್‌ರೈಲುಗಳು ಮತ್ತು ಸೇತುವೆಯ ತಳಭಾಗದ ಕುಸಿಯುವುದನ್ನು ನೋಡಬಹುದು. ರಸ್ತೆಯ ಭಾಗ ಕುಸಿದಂತೆ ವಾಹನಗಳು ನೀರಿಗೆ ಬೀಳುವುದನ್ನು ನೋಡಬಹುದು. ಸೇತುವೆಯ ಕುಸಿದ ಭಾಗದ ಬಳಿ ಇದ್ದ ಪಾದಚಾರಿಗಳು ಆತಂಕದಿಂದ ಓಡಿ ಹೋಗುತ್ತಿರುವುದನ್ನು ನೋಡಬಹುದು.

ಫೆಬ್ರವರಿ 16, 2026ರಂದು ಇನ್‌ಸ್ಟಾಗ್ರಾಮ್‌ ಖಾತೆದಾರರೊಬ್ಬರು ʼdramatic collapse of Overloaded Bridge in flooded valleyʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಓವರ್‌ಲೋಡೆಡ್‌ ಸೇತುವೆಯೊಂದು ಕುಸಿದಿದೆʼ ಎಂದು ಬರೆದಿರುವುದನ್ನು ನೋಡಬಹುದು

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)​


ಫೆಬ್ರವರಿ 6, 2026ರಂದು ಎಕ್ಸ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼThis is absolutely terrifying to watchʼ ಎಂದು ಬರೆದಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಇದು ನೋಡಲು ತುಂಬಾ ಭಯಾನಕವಾಗಿದೆʼ ಎಂದು ಬರೆದಿದ್ದಾರೆ ಎಂದು ತಿಳಿಯಿತು

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)​


ಫೆಬ್ರವರಿ 16, 2026ರಂದು ಎಕ್ಸ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼपल भर में पुल टूटा, और सब कुछ पानी में समा गया एक झटके में सब बदल गया।ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಸೇತುವೆ ಕುಸಿದ ಕ್ಷಣ ಮಾತ್ರದಲ್ಲಿ ಎಲ್ಲಾ ಬದಲಾಗೊಯಿತುʼ ಎಂದು ಬರೆದಿರುವುದನ್ನು ನೋಡಬಹುದು

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)


ಮತ್ತಷ್ಟು ವಿಡಿಯೋಗಳನ್ನು ನೀವಿಲ್ಲಿ, ಇಲ್ಲಿ ನೋಡಬಹುದು

ಫ್ಯಾಕ್ಟ್‌ಚೆಕ್‌

ವೈರಲ್‌ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

ನಾವು ವೈರಲ್‌ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್‌ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಸೇತುವೆ ಕುಸಿದು ವಾಹನಗಳು ಮತ್ತು ಜನರು ನದಿಗೆ ಮುಳುಗಿಹೋದರೆ, ಆ ಸಮಸ್ಯೆಯ ಬಗ್ಗೆ ಸುದ್ದಿ ವರದಿಗಳು ಖಂಡಿತವಾಗಿಯೂ ಬರುತ್ತವೆ. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ವೈರಲ್‌ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್‌ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್‌ ಮೋಷನ್‌ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು. ಹಾಗೆ ಅನೇಕ ಎಕ್ಸ್‌ ಬಳಕೆದಾರರು ವೈರಲ್‌ ಆದ ಪೊಸ್ಟ್‌ಗೆ ಎಐ ಸಹಾಯಕ 'ಗ್ರೋಕ್' ಅವರನ್ನು ಟ್ಯಾಗ್ ಮಾಡಿ ವೀಡಿಯೊ ನಿಜವಾದ ಘಟನೆಯಾ ಎಂದು ಕೇಳುತ್ತಿರುವುದು ನೋಡಬಹುದು. ಕೆಲವರು ಘಟನೆ ಎಲ್ಲಿ ನಡೆಯಿತು ಎಂದು ಕೇಳುತ್ತಿದ್ದಾರೆ.

ನಾವು ವೈರಲ್‌ ಆದ ವಿಡಿಯೋವನ್ನು ಮತ್ತೊಮ್ಮೆ ಸೂಕ್ಷ್ಮವಾಗಿ ಗಮನಿಸಿದೆವು ವಿಡಿಯೊದ ಆರಂಭದಲ್ಲಿ ಇರುವ ಸೇತುವೆಯ ಬಲಭಾಗದಲ್ಲಿರುವ ರೇಲಿಂಗ್ 5 ಸೆಕೆಂಡುಗಳ ನಂತರ ಮರೆಯಾಗುತ್ತದೆ. 00:00 ಸೆಕೆಂಡ್ ಗುರುತು ಮತ್ತು 00:03 ಸೆಕೆಂಡ್ ಗುರುತುಗಳ ನಡುವೆ, ಸೇತುವೆಯ ಮೇಲಿದ್ದ ಜನರು ಕಣ್ಮರೆಯಾಗುವುದನ್ನು ನಾವು ಕಂಡುಕೊಂಡೆವು.




ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್‌ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಸೈಟ್‌ ಇಂಜಿನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋ 92% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಹೈವ್‌ ಮಾಡರೇಶನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು 99.9 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼವಾಸ್‌ ಇಟ್‌ ಎಐʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್‌ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

Claim :  ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯೊಂದು ಕುಸಿದಿದೆ ಎಂದು ಎಐ ವಿಡಿಯೋ ಹಂಚಿಕೆ
Claimed By :  Social Media Users
Fact Check :  Unknown
Tags:    

Similar News