ಫ್ಯಾಕ್ಟ್‌ಚೆಕ್: ಎರಡು ಭಾಗಗಳಾಗಿ ಬೇರ್ಪಟ್ಟಂತಹ ದೇಹವನ್ನು ಬ್ಲೂಟೂತ್ ಮೂಲಕ ಜೋಡಿಸಲು ಸಿದ್ದವಾಗಿದೆ ಎಂದು ಎಐ ವಿಡಿಯೋ ಹಂಚಿಕೆ
ಎರಡು ಭಾಗಗಳಾಗಿ ಬೇರ್ಪಟ್ಟಂತಹ ದೇಹವನ್ನು ಬ್ಲೂಟೂತ್ ಮೂಲಕ ಜೋಡಿಸಲು ಸಿದ್ದವಾಗಿದೆ ಎಂದು ಎಐ ವಿಡಿಯೋ ಹಂಚಿಕೆ
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೇಹ ಎರಡು ಭಾಗಗಳಾಗಿ ಬೇರ್ಪಟ್ಟಂತಹ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಯುವತಿಯ ಸೊಂಟದಿಂದ ಮೇಲ್ಬಾಗ ಒಂದು ಕಡೆ ಹಾಗೆ ಸೊಂಟದಿಂದ ಕೆಳಗಿರುವ ದೇಹ ಬೇರ್ಪಟ್ಟಿರುವುದನ್ನು ನೋಡಬಹುದು. ಬ್ಲೂಟೂತ್ ಮೂಲಕ ಬೇರ್ಪಟ್ಟ ದೇಹ ಒಂದಾಗಲು ಸಿದ್ದವಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿೊಕೊಳ್ಳುತ್ತಿದ್ದಾರೆ.
ಏಪ್ರಿಲ್ 03, 2026ರಂದು ಎಕ್ಸ್ ಖಾತೆದಾರರೊಬ್ಬರು ತನ್ನ ಖಾತೆಯಲ್ಲಿ ʼThe Bluetooth device is ready to pairʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼದೇಹವನ್ನು ಬ್ಲೂಟೂತ್ ಸಾಧನದಿಂದ ಜೋಡಿಸಲು ಸಿದ್ಧವಾಗಿದೆʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಏಪ್ರಿಲ್ 04, 2026ರಂದು ಮತ್ತೊಂದು ಎಕ್ಸ್ ಖಾತೆಯಲ್ಲಿ ʼBody splits in two, then calmly reconnects as if nothing happened… pairing complete via Bluetooth🔵ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼದೇಹ ಎರಡು ಭಾಗಗಳಾಗಿ ಬೇರ್ಪಟ್ಟಂತೆ ಕಾಣುತ್ತದೆ, ನಂತರ ಏನೂ ಆಗದಂತೆ ಮತ್ತೆ ಸೇರಿಕೊಳ್ಳುತ್ತದೆʼ ಎಂದು ಬರೆದು ಹಂಚಿಕೊಂಡಿರುವುದನ್ನು ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ.
ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು. ಇಂತಹ ತಪ್ಪುಗಳು ಸಾಮಾನ್ಯವಾಗಿ ಎಐ ಮೂಲಕ ತಯಾರಿಸಿದ ವಿಡಿಯೋಗಳಲ್ಲಿ ಕಾಣಿಸುತ್ತವೆ. ಈ ಎಲ್ಲ ಕಾರಣಗಳಿಂದ ಈ ವಿಡಿಯೋ ಡಿಜಿಟಲ್ ರೀತಿಯಲ್ಲಿ ತಯಾರಿಸಿರಬಹುದು ಎಂಬ ಅನುಮಾನಗಳು ಮೂಡಿ ನಾವು ಎಐ ಟೂಲ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 92% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 90.8% ಪ್ರತಿಶಾತದಷ್ಟು, ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ಎರಡು ವಿಡಿಯೋವು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.