ಫ್ಯಾಕ್ಟ್‌ಚೆಕ್: ಫೆರಾರಿ ಕಾರಿನ ಮೇಲೆ ಗೂಳಿಯೊಂದು ಹಾರಿದೆ ಎಂದು ಎಐ ವಿಡಿಯೋ ಹಂಚಿಕೆ
ಫೆರಾರಿ ಕಾರಿನ ಮೇಲೆ ಗೂಳಿಯೊಂದು ಹಾರಿದೆ ಎಂದು ಎಐ ವಿಡಿಯೋ ಹಂಚಿಕೆ
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಆರೆಂಜ್ ಬಣ್ಣದ ಕಾರಿನ ಮೇಲೆ ಗೂಳಿಯೊಂದು ಜಿಗಿಯುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಅಕ್ಟೋಬರ್ 07, 2025ರಂದು ಯೂಟ್ಯೂಬ್ ಖಾತೆದಾರರೊಬ್ಬರು ʼಫೆರಾರಿ ಕಾರ್ ಮೇಲೆ ಹಾರಿದ ಗೂಳಿ ಪರಾರಿʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನಾವಿಲ್ಲಿ ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು
ಅಕ್ಟೋಬರ್ 06, 2025ರಂದು ಯೂಟ್ಯೂಬ್ ಖಾತೆದಾರರೊಬ್ಬರು ́ರೋಡ್‌ನಲ್ಲಿ ಹೋಗುತ್ತಿದ ಲಂಬೊರ್ಘನಿ ಕಾರ್ ಮೇಲೆ ಗೂಳಿ ಓದಿದು ನೋಡಿʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು
ಫೇಸ್‌ಬುಕ್ ಖಾತೆದಾರರೊಬ್ಬರು ತನ್ನ ಖಾತೆಯಲ್ಲಿ ʼಫೆರಾರಿ ಕಾರ್ ಮೇಲೆ ಹಾರಿದ ಗೂಳಿ ಪರಾರಿʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು
ಅಕ್ಟೋಬರ್ 07, 2025ರಂದು ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತನ್ನ ಖಾತೆಯಲ್ಲಿ ʼಫೆರಾರಿ ಕಾರ್ ಮೇಲೆ ಹಾರಿದ ಗೂಳಿ ಪರಾರಿʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನಾವಿಲ್ಲಿ ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು
ಅಕ್ಟೋಬರ್ 07, 2025ರಂದು ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತನ್ನ ಖಾತೆಯಲ್ಲಿ ʼಫೆರಾರಿ ಕಾರ್ ಮೇಲೆ ಹಾರಿದ ಗೂಳಿ ಪರಾರಿʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನಾವಿಲ್ಲಿ ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋ ಸಾಮಾಜಿಕ ಜಾಲತಾಣದ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಲನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ, ಅಕ್ಟೋಬರ್ 4 ರಂದು ಐಕಲಕಾರಿ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಅದೇ ದೃಶ್ಯಗಳನ್ನು ನಾವು ಕಂಡುಕೊಂಡಿದ್ದೇವೆ. ಶೀರ್ಷಿಕೆ ಹೀಗಿದೆ, ‘‘@imagineartofficial #ImagineArt1.0 ಕೋಪಗೊಂಡ ಹಸು ಭಾರತದಲ್ಲಿ ಲಂಬೋರ್ಘಿನಿಗೆ ಹಾನಿ ಮಾಡಿದೆ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನ ಬಯೋದಲ್ಲಿ AI ಫಿಲ್ಮ್‌ಮೇಕರ್ ಮತ್ತು ಚಲನಚಿತ್ರ ನಿರ್ಮಾಪಕ, AI ಕಲೆಯ ಜಗತ್ತನ್ನು ರಚಿಸುವುದು ಎಂದು ಬರೆಯಲಾಗಿದೆ. ಈ ಖಾತೆಯಲ್ಲಿ ಹಸುಗಳು ವಾಹನಗಳ ಮೇಲೆ ದಾಳಿ ಮಾಡುವ ಹಲವು ವೀಡಿಯೊಗಳಿವೆ. ಹಸುವೊಂದು ಆಟೋ ಮೇಲೆ ದಾಳಿ ಮಾಡುವ ವೀಡಿಯೊವನ್ನು ಕೂಡ ಹಂಚಿಕೊಳ್ಳಲಾಗಿದೆ.
ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ಸೈನ್‌ಬೋರ್ಡ್‌ಗಳಲ್ಲಿನ ಅಕ್ಷರವು ಅರ್ಥಹೀನವಾಗಿದೆ ಮತ್ತು ಕ್ಯಾಮೆರಾ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುತ್ತಿದ್ದಂತೆ, ಬ್ಯಾಕ್ಗ್ರೌಂಡ್ ಸಂಪೂರ್ಣವಾಗಿ ಬದಲಾಗುತ್ತದೆ. ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳ ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 97% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.