ಫ್ಯಾಕ್ಟ್‌ಚೆಕ್‌: ಹೈದರಾಬಾದ್ ದೇವಾಲಯ ಘಟನೆ ವಿಡಿಯೋವನ್ನು ಮುಂಬೈನಲ್ಲಿ ಧಾರ್ಮಿಕ ಘೋಷಣೆ ಕೂಗಿಲ್ಲ ಎಂದು ಥಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೆ

ಹೈದರಾಬಾದ್ ದೇವಾಲಯ ಘಟನೆ ವಿಡಿಯೋವನ್ನು ಮುಂಬೈನಲ್ಲಿ ಧಾರ್ಮಿಕ ಘೋಷಣೆ ಕೂಗಿಲ್ಲ ಎಂದು ಥಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೆ

Update: 2026-02-20 02:30 GMT

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಒಬ್ಬ ವ್ಯಕ್ತಿಗೆ ಥಳಿಸುತ್ತಿರುವ ವಿಡಿಯೋ ವೈರಲ್‌ ಆಗುತ್ತಿದೆ. ವೈರಲ್‌ ಆದ ವಿಡಿಯೋವಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಬಲವಂತವಾಗಿ ಧಾರ್ಮಿಕ ಘೋಷಣೆಗಳನ್ನು ʼಜೈ ಶ್ರೀ ರಾಮ್ʼ ಕೂಗಲು ಒತ್ತಾಯಿಸುತ್ತಿರುವಂತೆ ಕಾಣಿಸುತ್ತದೆ. ಈ ಘಟನೆ ಮುಂಬೈನ ಮೀರಾ ರೋಡ್ ಪ್ರದೇಶದಲ್ಲಿ ನಡೆದಿದೆ ಎಂದು .ಆತನನ್ನು ಅವನ ಧರ್ಮದ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್‌ ಮಾಡಲಾಗುತ್ತಿದೆ.

ಫೆಬ್ರವರಿ 13, 2026ರಂದು ಇನ್‌ಸ್ಟಾಗ್ರಾಮ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼएक गरीब मुसलमान को कुछ तथाकथित हिन्दू हृदय सम्राट भीड़ समर्थक उसको पीट पीट कर जय श्री राम बोलने को मजबूर करते हुए क्या ये जुल्म नहीं है किसी गरीब के साथʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಹಿಂದು ಹೃದಯ ಸಾಮ್ರಾಟ್” ಬೆಂಬಲಿಗರು ಎಂದು ಹೇಳಿಕೊಳ್ಳುವ ಕೆಲವರು ಒಬ್ಬ ಬಡ ಮುಸ್ಲಿಂ ವ್ಯಕ್ತಿಯನ್ನು ಹೊಡೆದು, ಅವನಿಂದ “ಜೈ ಶ್ರೀ ರಾಮ್” ಎಂದು ಹೇಳಿಸಲು ಬಲವಂತ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ವಿಶೇಷವಾಗಿ ಒಬ್ಬ ಬಡ ವ್ಯಕ್ತಿಯ ಜೊತೆ ವರ್ತಿಸುವುದು ಅನ್ಯಾಯವೇ? ತಪ್ಪೇ? ಎಂದು ಪ್ರಶ್ನಿಸಲಾಗುತ್ತಿದೆ.

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ಇನ್‌ಸ್ಟಾಗ್ರಾಮ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼभीड़: "जय श्री राम! जय श्री राम! "ओए! जय श्री राम बोल! व्यक्तिः "बोल जय श्री राम बोल" बताया जा रहा ये वीडियो मुंबई के मीरा रोड की है, जहां एक मुस्लिम लड़के को धार्मिक पहचान के आधार पर पिटाई की गई और जबरन जय श्री राम के नारे लगवाएं!́ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼ ವೈರಲ್ ಆಗಿರುವ ವಿಡಿಯೋದಲ್ಲಿ, ಜನರ ಗುಂಪೊಂದು ಜೋರಾಗಿ “ಜೈ ಶ್ರೀ ರಾಮ್! ಜೈ ಶ್ರೀ ರಾಮ್!” ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಅವರು ಒಬ್ಬ ಮುಸ್ಲಿಂ ಬಾಲಕನನ್ನು ಹೊಡೆದು, “ಓಯ್! “ಜೈ ಶ್ರೀ ರಾಮ್” ಎಂದು ಬಲವಂತವಾಗಿ ಹೇಳಿಸಲಾಗಿದೆ ಎಂದು ಪೋಸ್ಟ್‌ಗಳಲ್ಲಿ ಆರೋಪಿಸಲಾಗಿದೆ.


ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ವೈರಲ್‌ ಆದ ಮತ್ತೊಂದು ಪೊಸ್ಟ್‌ನ್ನು ನೀವಿಲ್ಲಿ ನೋಡಬಹುದು

ಫ್ಯಾಕ್ಟ್‌ಚೆಕ್‌

ವೈರಲ್‌ ಆದ ಸುದ್ದಿ ಸಾಮಾಜಿಕ ಜಾಲತಾಣದ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವವಾಗಿ, ಈ ವಿಡಿಯೋ ಮುಂಬೈನದ್ದಲ್ಲ. ಹೈದರಾಬಾದ್‌ನ ಮಲ್ಕಾಜ್‌ಗಿರಿಯಲ್ಲಿ ವ್ಯಕ್ತಿಯೊಬ್ಬ ದೇವಾಲಯದ ಆವರಣದಲ್ಲಿ ಮಲವಿಸರ್ಜನೆ ಮಾಡುತ್ತಿದ್ದಾಗ ಸಿಕ್ಕಿಬಿದ್ದ ನಂತರ ನಡೆದ ಪ್ರತಿಭಟನೆಗೆ ಸಂಬಂಧಿಸಿದ್ದು.

ನಾವು ವೈರಲ್‌ ಆದ ಸುದ್ದಿಯಲ್ಲಿರುವ ಸತ್ಯಾಂಶವನ್ನು ತಿಳಿಯಲು ನಾವು ವಿಡಿಯೋವಿನ ಕೆಲವು ಪ್ರಮುಖ ಕೀಫ್ರೇಮ್‌ಗಳನ್ನು ಬಳಸಿ ಗೂಗಲ್‌ನಲ್ಲಿ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ, ಜನವರಿ 12, 2026ರಂದು ಟೈಮ್ಸ್‌ ಆಫ್‌ ಇಂಡಿಯಾ ವೆಬ್‌ಸೈಟ್‌ನಲ್ಲಿ ʼ'Mentally unsound' Karnataka man held for desecration of Hyderabad ಟೆಂಪಲ್ʼ ಎಂಬ ಶೀರ್ಷಿಕೆಯೊಂದಿಗೆ ವರದಿ ಮಾಡಿರುವುದನ್ನು ನೋಡಬಹುದು. ವರದಿಯಲ್ಲಿ ʼಕಳೆದ ತಿಂಗಳು ಹೈದರಾಬಾದ್‌ನ ಸಫಿಲ್ಗುಡಾ ಪ್ರದೇಶದಲ್ಲಿರುವ ಕಟ್ಟ ಮೈಸಮ್ಮ ದೇವಸ್ಥಾನದಲ್ಲಿ ನಡೆದಿದ್ದ ಒಂದು ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. 26 ವರ್ಷದ ಒಬ್ಬ ವ್ಯಾಪಾರಿಯನ್ನು ದೇವಸ್ಥಾನದಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಆ ವ್ಯಕ್ತಿ ಸುಮಾರು ಒಂದು ತಿಂಗಳ ಹಿಂದೆ ಬೀದರ್‌ನಿಂದ ಹೈದರಾಬಾದ್‌ಗೆ ಬಂದಿದ್ದನು ಎಂದು ಪೊಲೀಸರು ತಿಳಿಸಿದ್ದರು. ಬೀದರ್ ಅಧಿಕಾರಿಗಳ ಮಾಹಿತಿ ಪ್ರಕಾರ, ಅವನ ಮೇಲೆ ಯಾವುದೇ ಅಪರಾಧ ಪ್ರಕರಣಗಳಿಲ್ಲದಿದ್ದರೂ, ಅವನು ಮಾನಸಿಕವಾಗಿ ಸ್ಥಿರನಲ್ಲ ಎಂಬ ದಾಖಲೆ ಇದೆ ಎಂದು ಹೇಳಲಾಗಿತ್ತು. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡು, ಅವನ ಮಾನಸಿಕ ಸ್ಥಿತಿ ಮತ್ತು ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆʼ ಎಂದು ವರದಿಯಾಗಿದೆ


ಜನವರಿ 11, 2026 ರಂದು ಎನ್‌ಡಿಟಿವಿ ಯೂಟ್ಯೂಬ್‌ ಚಾನೆಲ್‌ನಲ್ಲಿ ʼHyderabad News | Tension In Hyderabad After Man Allegedly Found Defecating Near Templeʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಇಕೊಂಡಿರುವುದನ್ನು ನಾವು ನೋಡಬಹುದು. ಈ ವರದಿಯಲ್ಲಿಈ ಘಟನೆ ಹೈದರಾಬಾದ್‌ನಲ್ಲಿ ನಡೆದಿದ್ದು, ಮುಂಬೈನ ಮೀರಾ ರಸ್ತೆಯಲ್ಲಿ ನಡೆದ ಹಲ್ಲೆಯಲ್ಲ, ದೇವಸ್ಥಾನದ ಬಳಿ ಮಲವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಒಳಗೊಂಡ ಪ್ರಕರಣಕ್ಕೆ ಸಂಬಂಧಿಸಿದ್ದು ಎಂದು ಸಾಭೀತಾಗಿದೆ.

Full View

ಮತ್ತಷ್ಟು ವರದಿಗಳನ್ನು ನೀವಿಲ್ಲಿ ನೋಡಬಹುದು

ಹೆಚ್ಚಿನ ಹುಡುಕಾಟ ನಡೆಸಿದಾಗ ಘಟನೆಯ ವಿವರಗಳನ್ನು ದೃಢಪಡಿಸುವ ಹಲವಾರು ಸುದ್ದಿ ವರದಿಗಳು ನಮಗೆ ಕಂಡುಬಂದವು. ಜನವರಿ 11, 2026ರಂದು ಇಂಡಿಯಾ ಟುಡೇ ವೆಬ್‌ಸೈಟ್‌ನಲ್ಲಿ ʼTemple desecration ignites fury in Hyderabad: Man caught defiling Kattamaisamma shrine, arrestedʼ ಎಂಬ ಶೀರ್ಷಿಕೆಯೊಂದಿಗೆ ವರದಿ ಮಾಡಿದ್ದಾರೆ. ಈ ವರದಿಯ ಪ್ರಕಾರ, ಹೈದರಾಬಾದ್‌ನ ಮಲ್ಕಜ್‌ಗಿರಿಯಲ್ಲಿ ಕಟ್ಟಮೈಸಮ್ಮ ದೇವಿ ದೇವಾಲಯದ ಆವರಣದಲ್ಲಿ ಮಲವಿಸರ್ಜನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದ ನಂತರ ಈ ಘಟನೆ ಸಂಭವಿಸಿದೆ, ಇದು ಹಿಂದೂ ಗುಂಪುಗಳು ಮತ್ತು ಬಿಜೆಪಿ ನಾಯಕರಿಂದ ಪ್ರತಿಭಟನೆಗೆ ಕಾರಣವಾಯಿತು. ಕಾರ್ಯಕರ್ತರು ಆರೋಪಿಯನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದರು, ನಂತರ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ವೈರಲ್ ಕ್ಲಿಪ್ ಮುಂಬೈನದ್ದಲ್ಲ, ಹೈದರಾಬಾದ್‌ನದ್ದು ಎಂದು ಇದು ದೃಢಪಡಿಸುತ್ತದೆ.


ಇದರಿಂದ ಸಾಭೀತಾಗಿದ್ದೇನೆಂದರೆ, ಹೈದರಾಬಾದ್‌ನ ಮಲ್ಕಜ್‌ಗಿರಿಯಲ್ಲಿ ಕಟ್ಟಮೈಸಮ್ಮ ದೇವಿ ದೇವಾಲಯದೊಳಗೆ ಮಲವಿಸರ್ಜನೆ ಮಾಡುವಾಗ ಸಿಕ್ಕಿಬಿದ್ದ ಮುಸ್ಲಿಂ ವ್ಯಕ್ತಿಯನ್ನು ಥಳಿಸುತ್ತಿರುವ ಈ ವೀಡಿಯೊವನ್ನು ಮುಂಬೈನ ಘಟನೆ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

Claim :  ಹೈದರಾಬಾದ್ ದೇವಾಲಯ ಘಟನೆ ವಿಡಿಯೋವನ್ನು ಮುಂಬೈನಲ್ಲಿ ಧಾರ್ಮಿಕ ಘೋಷಣೆ ಕೂಗಿಲ್ಲ ಎಂದು ಥಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೆ
Claimed By :  Social Media Users
Fact Check :  Unknown
Tags:    

Similar News