ಫ್ಯಾಕ್ಟ್‌ಚೆಕ್‌: ಭಾರತದಲ್ಲಿ ಬಂಗೀ ಜಂಪಿಂಗ್‌ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದ ಯುವತಕ ಎಂದು ಎಐ ವಿಡಿಯೋ ಹಂಚಿಕೆ

ಭಾರತದಲ್ಲಿ ಬಂಗೀ ಜಂಪಿಂಗ್‌ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದ ಯುವತಕ ಎಂದು ಎಐ ವಿಡಿಯೋ ಹಂಚಿಕೆ

Update: 2025-12-26 04:00 GMT

ಸಾಹಸಗಳನ್ನು ಇಷ್ಟ ಪಡುವವರಿಗೆ ಜೀವನದಲ್ಲಿ ಒಮ್ಮೆಯಾದರೂ ಎತ್ತರದ ಶಿಖರದಿಂದ ಬಂಗೀ ಜಂಪಿಂಗ್ ಮಾಡಬೇಕೆಂಬುದು ಕನಸಾಗಿರುತ್ತದೆ. ಬಂಗೀ ಜಂಪಿಂಗ್ ಅತ್ಯುತ್ತಮವಾದ ಸಾಹಸ ಕ್ರೀಡೆಯಾಗಿದ್ದು, ನಮ್ಮ ಭಾರತ ದೇಶದ ಹಲವು ಕಡೆಯಲ್ಲಿ ಬಂಗೀ ಜಂಪಿಂಗ್ ಸಾಹಸ ಕ್ರೀಡೆಯನ್ನು ನೋಡಬಹುದು. ಸಾಹಸ ಯುವ ಜನರ ಫೇವೆರಿಟ್. ಎತ್ತರದ ಮತ್ತು ಭಯಾನಕ ಪ್ರಕೃತಿಯ ವಾತಾವರಣದಲ್ಲಿ ಬಂಗೀ ಜಂಪಿಂಗ್ ಮಾಡುವುದು ಸಾಹಸಿಗಳ ಕನಸು ಎಂದರೇ ತಪ್ಪಾಗಲಾರದು. ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳನ್ನು ನೋಡಿದಾಗ ಎದೆ ಝಲ್‌ ಎನಿಸುತ್ತದೆ. ಇದೀಗ ಅಂತಹದ್ದೇ ಎದೆ ಝಲ್‌ ಎನ್ನೋ ಭಯಾನಕ ದೃಶ್ಯವೊಂದು ವೈರಲ್‌ ಆಗಿದ್ದು, ಬಂಗೀ ಜಂಪಿಂಗ್‌ ವೇಳೆ ಹಗ್ಗ ತುಂಡಾಗಿ ಯುವಕನೊಬ್ಬ ಬಿದ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲಲ್ಲಿ ವೈರಲ್‌ ಆಗಿದೆ,

ಇತ್ತೀಚಿಗೆ ಬಂಗಿ ಜಂಪ್‌ ಸಂಬಂಧಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣವಾದ ವಾಟ್ಸಾಪ್‌ನಲ್ಲಿ ವೈರಲ್‌ ಆಗುತ್ತಿದೆ. ವಾಟ್ಸ್‌ಪ್‌ನಲ್ಲಿ ʼShocking A bungee jumping accident reportedly took place in India. This video is going viral now. Please watch carefully and forward to those who love bungee jumping.ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಆಘಾತಕಾರಿ ಬಂಗೀ ಜಂಪಿಂಗ್ ಅಪಘಾತ ಭಾರತದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ವೀಡಿಯೊ ಈಗ ವೈರಲ್ ಆಗುತ್ತಿದೆ. ದಯವಿಟ್ಟು ಎಚ್ಚರಿಕೆಯಿಂದ ವೀಕ್ಷಿಸಿ ಮತ್ತು ಬಂಗೀ ಜಂಪಿಂಗ್ ಇಷ್ಟಪಡುವವರಿಗೆ ಫಾರ್ವರ್ಡ್ ಮಾಡಿʼ ಎಂದು ಬರೆದಿರುವುದನ್ನು ನೋಡಬಹುದು.


ಎಕ್ಸ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼइतने वजन के साथ Bung Jumping करना कितना खतरनाक हो सकता है| ये देखेʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಇಷ್ಟೊಂದು ತೂಕವಿದ್ದರೂ ಬಂಗೀ ಜಂಪಿಂಗ್ ಎಷ್ಟು ಅಪಾಯಕಾರಿ? ಇದನ್ನು ನೋಡಿʼ ಎಂದು ಬರೆದಿರುವುದನ್ನು ನೋಡಬಹುದು. ಈ ವಿಡಿಯೋವಿನಲ್ಲಿ ʼಭಾರಿ ಗಾತ್ರದ ಯುವಕನೊಬ್ಬ ಬಂಗೀ ಜಂಪಿಂಗ್‌ ಮಾಡುವ ದೃಶ್ಯವನ್ನು ಕಾಣಬಹುದು. ಹಗ್ಗದ ಸಮೇತ ಆತ ಎತ್ತರದಿಂದ ಕೆಳಗೆ ಜಂಪ್‌ ಮಾಡುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಹಗ್ಗ ಕಟ್‌ ಆಗಿದ್ದು, ಹಗ್ಗ ತುಂಡಾದ ಪರಿಣಾಮ ಆತ ಡೈರೆಕ್ಟ್‌ ಆಗಿ ಭೂಮಿಯ ಮೇಲೆ ಬೀಳುವುದನ್ನು ನೋಡಬಹುದುʼ

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)


ನವಂಬರ್‌ 10, 2025ರಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಭಾರಿ ಗಾತ್ರದ ಯುವಕನೊಬ್ಬ ಬಂಗೀ ಜಂಪಿಂಗ್‌ ಮಾಡುವ ದೃಶ್ಯವನ್ನು ಕಾಣಬಹುದು. ಹಗ್ಗದ ಸಮೇತ ಆತ ಎತ್ತರದಿಂದ ಕೆಳಗೆ ಜಂಪ್‌ ಮಾಡುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಹಗ್ಗ ಕಟ್‌ ಆಗಿದ್ದು, ಹಗ್ಗ ತುಂಡಾದ ಪರಿಣಾಮ ಆತ ಡೈರೆಕ್ಟ್‌ ಆಗಿ ನದಿ ನೀರಿಗೆ ಬಿದ್ದಿರುವುದನ್ನು ನೋಡಬಹುದು.

ವೈರಲ್‌ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)


ಮತ್ತಷ್ಟು ವಿಡಿಯೋವನ್ನು ನೀವಿಲ್ಲಿ, ಇಲ್ಲಿ ನೋಡಬಹುದು

ಫ್ಯಾಕ್ಟ್‌ಚೆಕ್‌

ವೈರಲ್‌ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

ನಾವು ವೈರಲ್‌ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್‌ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ವೈರಲ್‌ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್‌ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್‌ ಮೋಷನ್‌ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು.

ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು. ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್‌ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಸೈಟ್‌ ಇಂಜಿನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋ 98% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಹೈವ್‌ ಮಾಡರೇಶನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು 83.4 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼವಾಸ್‌ ಇಟ್‌ ಎಐʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್‌ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

Claim :  ಭಾರತದಲ್ಲಿ ಬಂಗೀ ಜಂಪಿಂಗ್‌ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದ ಯುವತಕ ಎಂದು ಎಐ ವಿಡಿಯೋ ಹಂಚಿಕೆ
Claimed By :  Social Media Users
Fact Check :  Unknown
Tags:    

Similar News