ಕಾಶ್ಮೀರದಲ್ಲಿ, ಭಾರೀ ಆಲಿ ಕಲ್ಲುಗಳು ಬಿದ್ದು ಕಾರ್ ಪುಡಿಪುಡಿ ಎಂದು ಎಐ ವಿಡಿಯೋ ಹಂಚಿಕೆ
ಕಾಶ್ಮೀರದಲ್ಲಿ, ಭಾರೀ ಆಲಿ ಕಲ್ಲುಗಳು ಬಿದ್ದು ಕಾರ್ ಪುಡಿಪುಡಿ ಎಂದು ಎಐ ವಿಡಿಯೋ ಹಂಚಿಕೆ
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಜಮ್ಮು ಕಾಶ್ಮೀರದಲ್ಲಿ ಭೀಕರ ಆಲಿಕಲ್ಲು ಬಿದ್ದಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ಹರಿದಾಡುತ್ತಿದೆ. ವೈರಲ್ ಆದ ವೀಡಿಯೊದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಆಲಿಕಲ್ಲು ಮಳೆಯ ದೃಶ್ಯಗಳನ್ನು ನೋಡಬಹುದು. ತುಂಬಾ ದೊಡ್ಡ ಗಾತ್ರದ ಆಲಿಕಲ್ಲುಗಳು ನಿರಂತರವಾಗಿ ಬೀಳುತ್ತಿವೆ. ಮಳೆ ತುಂಬಾ ಜೋರಾಗಿದ್ದರಿಂದ ಕಾರುಗಳಿಗೆ ಹೆಚ್ಚು ಹಾನಿಯಾಗಿದೆ. ಕಾರುಗಳ ಗಾಜುಗಳು ಒಡೆದು ಹೋಗಿವೆ ಮತ್ತು ಕೆಲವು ಭಾಗಗಳು ಹಾನಿಗೊಂಡಿವೆ. ರಸ್ತೆಗಳು, ಬಾಲ್ಕನಿಗಳು ಮತ್ತು ತೆರೆಯಾದ ಜಾಗಗಳು ಸಂಪೂರ್ಣವಾಗಿ ಆಲಿಕಲ್ಲಿನಿಂದ ತುಂಬಿಕೊಂಡಿವೆ. ಎಲ್ಲೆಡೆ ಹಿಮ ಬಿದ್ದಂತೆಯೇ ಕಾಣುತ್ತದೆ. ಅಕಸ್ಮಾತಾಗಿ ಹವಾಮಾನ ಬದಲಾವಣೆಯಿಂದ ಜನರು ಭಯಗೊಂಡು ಮನೆಯ ಒಳಗಿನಿಂದಲೇ ಅಥವಾ ಬಾಲ್ಕನಿಯಿಂದ ಈ ದೃಶ್ಯವನ್ನು ನೋಡುತ್ತಿದ್ದಾರೆ. ಒಟ್ಟಿನಲ್ಲಿ, ಈ ಆಲಿಕಲ್ಲು ಮಳೆ ಕಡಿಮೆ ಸಮಯದಲ್ಲೇ ತುಂಬಾ ನಷ್ಟವನ್ನು ಉಂಟುಮಾಡಿದೆ.
ಜನವರಿ 28, 2026ರಂದು ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಕಾಶ್ಮೀರದಲ್ಲಿ ಕಲ್ಲಿನ ಸೈಜು ಹಿಮಪಾತ ಕಾರು ನಜ್ಜು ನಜ್ಜುʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಜನವರಿ 28, 2026ರಂದು ಫೇಸ್‌ಬುಕ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಕಾಶ್ಮೀರದಲ್ಲಿ ಕಲ್ಲಿನ ಸೈಜು ಹಿಮಪಾತ ಕಾರು ನಜ್ಜು ನಜ್ಜುʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವೈರಲ್ ಆದ ವಿಡಿಯೋವನ್ನು ನೀವಿಲ್ಲಿ ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್‌ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 92% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 99.9 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.