ಫ್ಯಾಕ್ಟ್‌ಚೆಕ್‌: ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊಹಮ್ಮದ್ ಸಿರಾಜ್ ನಮಾಜ್ ಮಾಡಿದ್ದಾರೆ ಎಂದು ಎಐ ಚಿತ್ರ ಹಂಚಿಕೆ​

ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊಹಮ್ಮದ್ ಸಿರಾಜ್ ನಮಾಜ್ ಮಾಡಿದ್ದಾರೆ ಎಂದು ಎಐ ಚಿತ್ರ ಹಂಚಿಕೆ​

Update: 2026-01-26 02:50 GMT

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಕ್ರಿಕೆಟ್ ಆಟಗಾರ ಮೊಹಮ್ಮದ್ ಸಿರಾಜ್ ಕ್ರಿಕೆಟ್ ಮೈದಾನದಲ್ಲೇ ನಮಾಝ್ ಸಲ್ಲಿಸುತ್ತಿರುವಂತೆ ಕಾಣುತ್ತಿರುವ ಫೋಟೋವೊಂದು ಹರಿದಾಡುತ್ತಿದೆ. ಈ ಚಿತ್ರವನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ. ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ಸಮಯದಲ್ಲಿ ಈ ಚಿತ್ರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಳಕೆದಾರರು ಶೀರ್ಷಿಕೆಯೊಂದಗೆ ಫೋಟೋವನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಮಂದಿ, ಸಿರಾಜ್ ಮೈದಾನದಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಆ ಕ್ಷಣವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಸಿರಾಜ್ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ಭಾರತೀಯ ಕ್ರಿಕೆಟ್ ತಂಡದ ತರಬೇತುದಾರ ಸೆರೆಹಿಡಿದಿರುವ ಚಿತ್ರವೂ ಕಾಣಿಸಿಕೊಂಡಿದೆ.

ಜನವರಿ 15, 2026ರಂದು ಇನ್‌ಸ್ಟಾಗ್ರಾಮ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼʼFaith and strength converge in a defining moment, Mohammad Siraj performs Zuhr and Asr prayers before the match at Saurashtra Stadium Rajkot, uncompromising in his dedication to Salah, as Virat Kohli, Rohit Sharma, Gautam Gambhir, and Shreyas Iyer stand by with reverence, A new history is forged, faith prevails, cricket yields to spiritualityʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್‌ ಮಾಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼರಾಜಕೋಟಿನ ಸೌರಾಷ್ಟ್ರ ಸ್ಟೇಡಿಯಂನಲ್ಲಿ ಪಂದ್ಯ ಆರಂಭಕ್ಕೂ ಮೊದಲು ಮಹಮ್ಮದ್ ಸಿರಾಜ್ ಅವರು ಜುಹರ್ ಮತ್ತು ಅಸರ್ ನಮಾಝ್ ಸಲ್ಲಿಸಿದರು. ತಮ್ಮ ಧರ್ಮದ ಮೇಲಿನ ನಿಷ್ಠೆಯನ್ನು ಅವರು ಯಾವುದೇ ತಡವಿಲ್ಲದೆ ತೋರಿಸಿದರು. ಈ ಸಮಯದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಗೌತಮ್ ಗಂಭೀರ್ ಮತ್ತು ಶ್ರೇಯಸ್ ಅಯ್ಯರ್ ಅವರು ಗೌರವದೊಂದಿಗೆ ಪಕ್ಕದಲ್ಲೇ ನಿಂತಿದ್ದರು. ಕ್ರಿಕೆಟ್‌ಗಿಂತ ಮೊದಲು ಧರ್ಮಕ್ಕೆ ಆದ್ಯತೆ ನೀಡಿದ ಇದು ಒಂದು ವಿಶೇಷ ಕ್ಷಣವಾಯಿತುʼ ಎಂದು ಬರೆದಿರುವುದನ್ನು ನೋಡಬಹುದು

ವೈರಲ್‌ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)


​ಜನವರಿ 14, 2026ರಂದು ಫೇಸ್‌ಬುಕ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼರಾಜಕೋಟಿನ ಸೌರಾಷ್ಟ್ರ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗುವ ಮೊದಲು ಮಹಮ್ಮದ್ ಸಿರಾಜ್ ಅವರು ಜುಹರ್ ಹಾಗೂ ಅಸರ್ ನಮಾಝ್ ನೆರವೇರಿಸಿದರು. ತಮ್ಮ ಧರ್ಮದ ಮೇಲಿನ ಅಚಲ ನಂಬಿಕೆಯನ್ನು ಅವರು ಸ್ಪಷ್ಟವಾಗಿ ತೋರಿಸಿದರು. ಈ ವೇಳೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಗೌತಮ್ ಗಂಭೀರ್ ಮತ್ತು ಶ್ರೇಯಸ್ ಅಯ್ಯರ್ ಅವರು ಸಂಪೂರ್ಣ ಗೌರವದೊಂದಿಗೆ ಅವರ ಪಕ್ಕದಲ್ಲೇ ನಿಂತಿದ್ದರು. ಕ್ರಿಕೆಟ್‌ಗಿಂತಲೂ ಧರ್ಮಕ್ಕೆ ಮೊದಲ ಆದ್ಯತೆ ನೀಡಿದ ಈ ಕ್ಷಣ ಎಲ್ಲರ ಗಮನ ಸೆಳೆಯಿತುʼ ಎಂದು ಬರೆದಿರುವುದನ್ನು ನೋಡಬಹುದು.

Full View

ವೈರಲ್‌ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)


​ವೈರಲ್‌ ಆದ ಮತ್ತೊಂದು ಪೊಸ್ಟ್‌ನ್ನು ನೀವಿಲ್ಲಿ ನೋಡಬಹುದು.

ವೈರಲ್‌ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್‌)


.cls-1{fill:#001e36;}.cls-2{fill:#31a8ff;}Add to Photoshop Extension

​ಫ್ಯಾಕ್ಟ್‌ಚೆಕ್‌

ವೈರಲ್‌ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್‌ ಆದ ಚಿತ್ರವನ್ನು ಎಐ ಮೂಲಕ ರಚಿಸಲಾಗಿದೆ.

ನಾವು ವೈರಲ್‌ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ನಾವು ವೈರಲ್‌ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ನಂತರ ನಾವು ಗೂಗಲ್‌ನಲ್ಲಿ ಫೋಟೋವನ್ನು ಉಪಯೋಗಿಸಿ ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್‌ ಫೋಟೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ಕ್ರಿಕೆಟಿಗನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ಮತ್ತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಸ್ಟಮೈಸ್ ಮಾಡಿದ ಕೀವರ್ಡ್ ಹುಡುಕಾಟಗಳ ಮೂಲಕ ಸ್ಕ್ಯಾನ್ ಮಾಡಿ, ಅವುಗಳಲ್ಲಿ ಯಾರಾದರೂ ಚಿತ್ರವನ್ನು ಹಂಚಿಕೊಂಡಿದ್ದಾರೆಯೇ ಎಂದು ಪರಿಶೀಲಿಸಿದರೆ ಅಲ್ಲಿಯೂ ನಮಗೆ ಅಂತಹ ಯಾವುದೇ ಚಿತ್ರ ಕಂಡುಬಂದಿಲ್ಲ.

ನಂತರ ನಾವು ವೈರಲ್‌ ಆದ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಮೊಹಮ್ಮದ್ ಸಿರಾಜ್ ಜೆರ್ಸಿಯಲ್ಲಿ ಡ್ರೀಮ್11 ಲೋಗೋ ಇರುವುದನ್ನು ನಾವಿಲ್ಲಿ ನೋಡಬಹುದು. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡವನ್ನು ಅಪೊಲೊ ಟೈರ್ಸ್ ಪ್ರಾಯೋಜಿಸುತ್ತಿದೆ. ಆದ್ದರಿಂದ, ಜೆರ್ಸಿಯಲ್ಲಿ ಡ್ರೀಮ್11 ಲೋಗೋ ಇರುವಿಕೆಯು ಚಿತ್ರವನ್ನು ಡಿಜಿಟಲ್ ಆಗಿ ಬದಲಾಯಿಸಿರಬಹುದು ಎಂದು ನಮಗೆ ಅನುಮಾನ ಮೂಡಿತು. ಹೆಚ್ಚುವರಿಯಾಗಿ, ಚಿತ್ರವು ಅಸ್ಪಷ್ಟ ಮತ್ತು ಅಸ್ವಾಭಾವಿಕವಾಗಿ ಕಾಣುತ್ತವೆ. , ಇದು ಎಐ-ರಚಿತ ದೃಶ್ಯಗಳ ಸಾಮಾನ್ಯ ಲಕ್ಷಣವಾಗಿದೆ. ಇದೆಲ್ಲಾ ಗಮನಿಸಿದರೆ ನಮಗೆ ಈ ಚಿತ್ರವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.


​​ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್‌ ಆದ ಚಿತ್ರವನ್ನು ಉಪಯೋಗಿಸಿ ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಸೈಟ್‌ ಇಂಜಿನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ಚಿತ್ರ 97% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


​​ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಹೈವ್‌ ಮಾಡರೇಶನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ಚಿತ್ರವನ್ನು 99.8 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


​​ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼವಾಸ್‌ ಇಟ್‌ ಎಐʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ಚಿತ್ರವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


​​ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್‌ ಆದ ಚಿತ್ರ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್‌ ಆದ ಪೊಟೋವನ್ನು ಎಐ ಮೂಲಕ ರಚಿಸಲಾಗಿದೆ.

Claim :  ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊಹಮ್ಮದ್ ಸಿರಾಜ್ ನಮಾಜ್ ಮಾಡಿದ್ದಾರೆ ಎಂದು ಎಐ ಚಿತ್ರ ಹಂಚಿಕೆ​
Claimed By :  Social Media Users
Fact Check :  Unknown
Tags:    

Similar News