ಫ್ಯಾಕ್ಟ್‌ಚೆಕ್: ಕೋತಿಯೊಂದು ಬೈಕ್ ಓಡಿಸಿದೆ ಎಂದು ಎಐ ವಿಡಿಯೋ ಹಂಚಿಕೆ
ಕೋತಿಯೊಂದು ಬೈಕ್ ಓಡಿಸಿದೆ ಎಂದು ಎಐ ವಿಡಿಯೋ ಹಂಚಿಕೆ
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕೋತಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋವನ್ನು ನೋಡಿದರೆ ʼಒಂದು ತರಕಾರಿ ಮಾರುಕಟ್ಟೆಯಲ್ಲಿ ನಡೆದುಕೊಂಡು ಹೋಗುತ್ತಿರುತ್ತದೆ. ಕೋತಿಯು ಗಾಡಿಯ ಇಗ್ನೀಷನ್‌ನಲ್ಲೇ ಕೀ ಇರುತ್ತದೆ. ಈ ಕೋತಿ ನಿಲ್ಲಿಸಿದ ಬೈಕ್‌ನ ಬಳಿಗೆ ಹೋಗುವುದನ್ನು, ಜಿಗಿಯುವುದನ್ನು, ವಾಹನವನ್ನು ಸ್ಟಾರ್ಟ್ ಮಾಡುವುದನ್ನು ನೋಡಬಹುದು. ಒಂದೇ ಸಮನೆ ಗಾಡಿಯನ್ನು ಸ್ಟಾರ್ಟ್ ಮಾಡಿ ಅಲ್ಲೇ ಒಂದು ಅಂಗಡಿಗೆ ಡಿಕ್ಕಿ ಹೊಡೆದು ಅಲ್ಲಿಂದ ಓಡಿಹೋಗುವುದನ್ನು ನೋಡಬಹುದು.
ನವಂಬರ್ 02, 2025ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼबंदर भी बहुत ऊटपटांग काम करते रहते हैं देखो बाइक को ठोक दिया. जब भी बाइक खड़ी करें चाबी निकालना ना भूले..!!ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಮಂಗಗಳು ಎಲ್ಲಾ ರೀತಿಯ ಹಾಸ್ಯಾಸ್ಪದ ಕೆಲಸಗಳನ್ನು ಮಾಡುತ್ತಲೇ ಇರುತ್ತವೆ, ನೋಡಿ, ಅವು ಬೈಕಿಗೆ ಡಿಕ್ಕಿ ಹೊಡೆಯುತ್ತವೆ. ನೀವು ಬೈಕ್ ನಿಲ್ಲಿಸಿದಾಗಲೆಲ್ಲಾ, ಕೀಲಿಯನ್ನು ಹೊರತೆಗೆಯಲು ಮರೆಯಬೇಡಿ.ʼ ಎಂದು ಬರೆದಿರುವುದನ್ನು ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಅಕ್ಟೋಬರ್ 31, 2025ರಂದು ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼइंसानों के स्टंट का Craze अब जानवरों तक भी.ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಮಾನವನ ಸಾಹಸಗಳ ಹುಚ್ಚು ಈಗ ಪ್ರಾಣಿಗಳಲ್ಲೂ...ʼ ಎಂದು ಬರೆದಿರುವುದನ್ನು ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ನವಂಬರ್ 6, 2025ರಂದು ಫೇಸ್‌ಬುಕ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼबंदर भी बहुत ऊटपटांग काम करते रहते हैं देखो बाइक को ठोक दिया | जब भी बाइक खड़ी करें चाबी निकालना ना भूले..!! Viral videoʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಮಂಗಗಳು ಕೂಡ ಕೆಲವು ಹುಚ್ಚು ಕೆಲಸಗಳನ್ನು ಮಾಡುತ್ತವೆ, ನೋಡಿ, ಅವು ಬೈಕಿಗೆ ಡಿಕ್ಕಿ ಹೊಡೆಯುತ್ತವೆ. ನೀವು ನಿಮ್ಮ ಬೈಕನ್ನು ನಿಲ್ಲಿಸಿದಾಗಲೆಲ್ಲಾ, ಕೀಲಿಗಳನ್ನು ಹೊರತೆಗೆಯಲು ಮರೆಯಬೇಡಿ..!! ವೈರಲ್ ವಿಡಿಯೋʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಅಕ್ಟೋಬರ್ 30, 2025ರಂದು ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼheavy riderʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಫೇಸ್‌ಬುಕ್ ಖಾತೆದಾರರೊಬ್ಬರು ಇದೇ ವಿಡಿಯೋವನ್ನು ಹಂಚಿಕೊಂಡು ʼhe wanted to steal the motocycleʼ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋದಲ್ಲಿ ಯಾವುದೇ ಸತ್ಯಾಂಶವಿಲ್ಲ. ವಾಸ್ತವವಾಗಿ ಈ ವಿಡಿಯೋವನ್ನು ಎಐ ಬಳಸಿ ರಚಿಸಲಾಗಿದೆ
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಲನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಇಲ್ಲಿಯೂ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ.
ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊದಲ್ಲಿ ಚಿತ್ರಿಸಲಾದ ತರಕಾರಿ ಅಂಗಡಿಗಳಲ್ಲಿ ಒಂದರಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು ಸೇರಿದಂತೆ ಹಲವಾರು ವ್ಯತ್ಯಾಸಗಳನ್ನು ಮತ್ತು ಕ್ಯಾಮೆರಾ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುತ್ತಿದ್ದಂತೆ, ಬ್ಯಾಕ್ಗ್ರೌಂಡ್ ಸಂಪೂರ್ಣವಾಗಿ ಬದಲಾಗುತ್ತದೆ ಜೊತೆಗೆ ಕ್ಲಿಪ್‌ನಲ್ಲಿ ತೋರಿಸಿರುವಂತೆ ಮಂಗವು ಬೈಸಿಕಲ್ ಸವಾರಿ ಮಾಡುವ ಸಾಧ್ಯತೆ ಕಡಿಮೆ. ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳ ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 97% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಹಾಗೆ ನಾವು ಇನ್ನೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 75.5 ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.