ಫ್ಯಾಕ್ಟ್‌ಚೆಕ್: ಪಾನಿಪುರಿ ನೀರಿನಲ್ಲಿ ಇಲಿ ಸತ್ತಿರುವುದನ್ನು ನೋಡಬಹುದು ಎಂದು ಎಐ ವಿಡಿಯೋ ಹಂಚಿಕೆ
ಪಾನಿಪುರಿ ನೀರಿನಲ್ಲಿ ಇಲಿ ಸತ್ತಿರುವುದನ್ನು ನೋಡಬಹುದು ಎಂದು ಎಐ ವಿಡಿಯೋ ಹಂಚಿಕೆ
ಪಾನಿಪುರಿ ಭಾರತೀಯರ ನೆಚ್ಚಿನ ಸ್ಟ್ರೀಟ್ ಫುಡ್ ಅಂತಾನೇ ಹೇಳಬಹುದು. ಅದರಲ್ಲೂ ಯುವತಿಯರಂತೂ ಪ್ರತಿನಿತ್ಯವೂ ಬೀದಿಬದಿಗಳಲ್ಲಿ ಮಾರಾಟ ಮಾಡುವಂತಹ ಪಾನಿಪುರಿಗಳನ್ನು ಬಹಳ ಇಷ್ಟಪಟ್ಟು ತಿಂತಾರೆ. ಬೀದಿಬದಿಗಳಲ್ಲಿ ಮಾರಾಟ ಮಾಡವಂತಹ ಆಹಾರಗಳ ರುಚಿ ಏನೋ ಅದ್ಭುತವಾಗಿರುತ್ತೆ ನಿಜ, ಆದ್ರೆ ಈ ಬೀದಿ ಬದಿಯ ವ್ಯಾಪಾರಿಗಳು ಸರಿಯಾದ ರೀತಿಯಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದಿಲ್ಲ ಎಂಬ ಆರೋಪ ಯಾವಾಗಲೂ ಕೇಳಿಬರುತ್ತಿರುತ್ತವೆ. ಈ ಕುರಿತ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ ಹರಿದಾಡುತ್ತಿರುತ್ತವೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಪಾನಿಪುರಿಗೆ ಸಂಬಂಧಿಸಿದ ವಿಡಿಯೋವೊಂದು ಹರಿದಾಡುತ್ತಿದೆ. ಇದರಲ್ಲಿ ಇಬ್ಬರು ಯುವತಿಯರು ಪಾನಿಪುರಿ ತಿನ್ನಲು ಬಂದಿರುವುದನ್ನು ನೋಡಬಹುದು. ವಿಡಿಯೋದಲ್ಲಿ ಕಾಣುವ ಪಾನಿಪುರಿ ಮಾರಾಟಗಾರ ಪಾನಿಯನ್ನು ತಿರಿಗಿಸಿ ಚಮಚವನ್ನು ಮೇಲೆ ಎತ್ತಿದಾಗ ಅದಲ್ಲಿ ಇಲಿಯೊಂದು ಸತ್ತಿರುವುದನ್ನು ನೋಡಬಹುದು.
ನವಂಬರ್ 02, 2025ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼi was enjoying Indian Pani Puriʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ನವಂಬರ್ 03, 2025ರಂದು ಯೂಟ್ಯೂಬ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼDangerous street Foodʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಫೇಸ್‌ಬುಕ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼWhen a dead rat came out in the water of Panipuri ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಪಾನಿಪುರಿಯ ನೀರಿನಲ್ಲಿ ಸತ್ತ ಇಲಿ ಹೊರಬಂದಾಗʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ಫೇಸ್‌ಬುಕ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼrat in Panipuriʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋವಿಗೆ ಕ್ಯಾಪ್ಷನ್ ಆಗಿ ʼLadkiyo ka Favorite Golgappeʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.
ವೈರಲ್ ಆದ ವಿಡಿಯೋವಿನನ್ನು ನೀವಿಲ್ಲಿ, ಇಲ್ಲಿ ನೋಡಬಹುದು.
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ 29, 2025ರಂದು ಇನ್‌ಸ್ಟಾಗ್ರಾಮ್ ಖಾತೆದಾರ ʼtitan.vidsʼ ತಮ್ಮ ಖಾತೆಯಲ್ಲಿ ʼpani puri rat inside street food in India. #AI #Soraaiʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. sora Ai ವೆಬ್‌ಸೈಟ್‌ನಲ್ಲಿ ಎಐ ರಚಿತ ಫೊಟೋಗಳನ್ನು ಮತ್ತು ವಿಡಿಯೋಗಳನ್ನು ರಚಿಸುವ ವೆಬ್‌ಸೈಟ್.
vitan.vids ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ಪಾನಿಪುರಿ ಮಾರಾಟಗಾರರು, ಪಾನಿಪುರಿಯ ನೀರಿನಲ್ಲಿ ಇಲಿ, ಹಲ್ಲಿ ಮತ್ತಷ್ಟು ಪ್ರಾಣಿಗಳು ನೀರಿನಲ್ಲಿರುವುದನ್ನು ನೋಡಬಹುದು. ಆಹಾರಕ್ಕೆ ಸಂಬಂಧಿಸಿದ ಸಾಕಷ್ಟು ಎಐ ರಚಿತ ವಿಡಿಯೋವನ್ನು ನಾವಿಲ್ಲಿ ನೋಡಬಹುದು.
ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳು ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು. ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್́ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 99% ಶತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಈ ಮಾಹಿತಿಯನ್ನು ಮತ್ತಷ್ಟು ಖಚಿತ ಪಡಿಸಿಕೊಳ್ಳಲು ನಾವು ಎಐ ಇಮೇಜ್ ಡಿಟೆಕ್ಷನ್ ಟೂಲ್ ʼಹೈವ್ ಮಾಡರೇಶನ್ʼ ನಲ್ಲಿ ಫೊಟೋವನ್ನು ಪರಿಶೀಲಿಸಿದೆವು. ಪರಿಶೀಲನೆಯಲ್ಲಿ ನಮಗೆ ಈ ಚಿತ್ರ 98.6 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ತಿಳಿದುಬಂದಿತು.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.