ಫ್ಯಾಕ್ಟ್‌ಚೆಕ್‌: ಸುಳ್ಯ ಸಂಪಾಜೆ ರಸ್ತೆಯಲ್ಲಿ ಜಾರಿ ಬಿದ್ದ ಗಜರಾಜ ಎಂದು ಎಐ ವಿಡಿಯೋ ಹಂಚಿಕೆ

ಸುಳ್ಯ ಸಂಪಾಜೆ ರಸ್ತೆಯಲ್ಲಿ ಜಾರಿ ಬಿದ್ದ ಗಜರಾಜ ಎಂದು ಎಐ ವಿಡಿಯೋ ಹಂಚಿಕೆ

Update: 2025-12-13 08:24 GMT

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಆನೆಯೊಂದು ಬೀಳುತ್ತಿರುವ ದೃಶ್ಯವೊಂದು ವೈರಲ್‌ ಆಗುತ್ತಿದೆ. ವಿಡಿಯೋವಿನಲ್ಲಿ ಆನೆಯೊಂದು ಬೆಟ್ಟದ ಮೇಲಿಂದ ಪಲ್ಟಿ ಹೊಡೆದು ಬೀಳುತ್ತುತ್ತಿರುವುದನ್ನು ನಾವಿಲ್ಲಿ ನೋಡಬಹುದು. ಈ ಘಟನೆ ಸುಳ್ಯ-ಸಂಪಾಜೆ ರಸ್ತೆಯಲ್ಲಿ ನಡೆದಿದೆ ಎಂದು ವಿಡಿಯೋವಿನಲ್ಲಿ ಕ್ಯಾಪ್ಷನ್‌ನೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಫೇಸ್‌ಬುಕ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ಆನೆಯೊಂದು ಮೇಲಿಂದ ಬೀಳುತ್ತಿರುವ ವಿಡಿಯೋವನ್ನು ಹಂಚಿಕೊಂಡು ಹೊಡೆಯುತ್ತಿರುವ ʼಬೆಟ್ಟದಿಂದ ಬಂದ ಆನೆ ಕಾಲು ಜಾರಿ ರಸ್ತೆಗೆ ಬಿದ್ದ ಘಟನೆʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Full View

ವೈರಲ್‌ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ಫೇಸ್‌ಬುಕ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ಆನೆಯೊಂದು ಮೇಲಿಂದ ಬೀಳುತ್ತಿರುವ ವಿಡಿಯೋವನ್ನು ಹಂಚಿಕೊಂಡು ಹೊಡೆಯುತ್ತಿರುವ ʼಬೆಟ್ಟದಿಂದ ಬಂದ ಆನೆ ಕಾಲು ಜಾರಿ ರಸ್ತೆಗೆ ಬಿದ್ದ ಘಟನೆʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವೈರಲ್‌ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ಫೇಸ್‌ಬುಕ್‌ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ಆನೆಯೊಂದು ಮೇಲಿಂದ ಬೀಳುತ್ತಿರುವ ವಿಡಿಯೋವನ್ನು ಹಂಚಿಕೊಂಡು ಹೊಡೆಯುತ್ತಿರುವ ʼಸುಳ್ಯ ಸಂಪಾಜೆ ರಸ್ತೆಯಲ್ಲಿ ಜಾರಿ ಬಿದ್ದ ಗಜರಾಜ' ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Full View

ವೈರಲ್‌ ಆದ ಪೊಸ್ಟ್‌ನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್‌)


ಫ್ಯಾಕ್ಟ್‌ಚೆಕ್‌

ವೈರಲ್‌ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

ನಾವು ವೈರಲ್‌ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್‌ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ವೈರಲ್‌ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್‌ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್‌ ಮೋಷನ್‌ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು.

ಈ ವಿಡಿಯೋವಿನಲ್ಲಿ ಗಮನಿಸುವುದಾದರೆ, ಅಷ್ಟು ಮೇಲಿಂದ ಆನೆ ಬಿದ್ದರೂ ಆನೆಗೆ ಏನೂ ಆಗಿಲ್ಲ. ಮೈ ಮೇಲೆ ಮಣ್ಣು ಸಹ  ಮೆತ್ತಿಕೊಳ್ಳದೆ ಇರುವುದನ್ನು ನಾವಿಲ್ಲಿ ಕಾಣಬಹುದು. ಆನೆ ಅಷ್ಟು ಎತ್ತರದಿಂದ ಬಿದ್ದರೂ ಅದಕ್ಕೆ ಏನೂ ಆಗದಂತೆ ತಕ್ಷಣವೇ ಎದ್ದೇಳುವುದು, ವಿಡಿಯೋ ಮಾಡುತ್ತಿರುವ ಚಾಲಕ ಸ್ವಲ್ಪನೂ ಹೆದರಿಕೊಳ್ಳದೆ ಅಲ್ಲಿಯೇ ನಿಂತು ವಿಡಿಯೋ ಮಾಡಿರುವುದು ಇವೆಲ್ಲಾ ಅಂಶಗಳನ್ನು ಪರಿಗಣಿಸಿದರೆ ವೈರಲ್‌ ಆದ ವಿಡಿಯೋ ನೈಜ ಘಟನೆ ಆಗಿರುವುದಿಲ್ಲ ಎಂಬ ಸಂಶಯ ಮೂಡಿತು


ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು. ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್‌ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಸೈಟ್‌ ಇಂಜಿನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋ 67% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼಹೈವ್‌ ಮಾಡರೇಶನ್‌ʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು 90.9 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಮತ್ತೋಂದು ಎಐ ಡಿಟೆಕ್ಟರ್‌ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್‌ ಟೂಲ್‌ ʼವಾಸ್‌ ಇಟ್‌ ಎಐʼ ಟೂಲ್‌ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.


ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್‌ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್‌ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

Claim :  ಸುಳ್ಯ ಸಂಪಾಜೆ ರಸ್ತೆಯಲ್ಲಿ ಜಾರಿ ಬಿದ್ದ ಗಜರಾಜ ಎಂದು ಎಐ ವಿಡಿಯೋ ಹಂಚಿಕೆ
Claimed By :  Social Media Users
Fact Check :  Unknown
Tags:    

Similar News