ಫ್ಯಾಕ್ಟ್‌ಚೆಕ್: ಭಾರತದ ಹಳ್ಳಿಯೊಂದರಲ್ಲಿ ಮೂರು ತಲೆಯ ಮರಿ ಆನೆಯಿದೆ ಎಂದು ಎಐ ವಿಡಿಯೋ ಹಂಚಿಕೆ
ಭಾರತದ ಹಳ್ಳಿಯೊಂದರಲ್ಲಿ ಮೂರು ತಲೆಯ ಮರಿ ಆನೆಯಿದೆ ಎಂದು ಎಐ ವಿಡಿಯೋ ಹಂಚಿಕೆ
ಇತ್ತೀಚಿಗೆ ಮೂರು ತಲೆಯಿರುವ ಆನೆ ಮರಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣವಾದ ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋಗೆ ಶೀರ್ಷಿಕೆಯಾಗಿ ʼಭಾರತದ ಹಳ್ಳಿಯೊಂದರಲ್ಲಿ ಮೂರು ತಲೆಯ ಮರಿ ಆನೆ ಪತ್ತೆಯಾಗಿದೆ. ಅಲ್ಲಿನ ಜನರೆಲ್ಲಾ ಈ ಆನೆಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.ʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು
ಇನ್‌ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼ35 Gaon me mila 3 sar wala hathi ka baccha... log bol rahe hain Ganesh ji ka avtarʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಒಂದು ಹಳ್ಳಿಯಲ್ಲಿ ಮೂರು ತಲೆಯ ಮರಿ ಆನೆ ಪತ್ತೆʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್)
ಡಿಸಂಬರ್ 16, 2025ರಂದು ಯೂಟ್ಯೂಬ್ ಖಾತೆಯಲ್ಲಿ #tiruchendur Miraculous baby elephant born with three headsʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼ#ತಿರುಚೆಂದೂರ್ ಮೂರು ತಲೆಗಳೊಂದಿಗೆ ಜನಿಸಿದ ಪವಾಡದ ಮರಿ ಆನೆʼ ಎಂದು ಬರೆದಿರುವುದನ್ನು ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್)
ವೈರಲ್ ಆದ ಮತ್ತಷ್ಟು ವಿಡಿಯೋಗಳನ್ನು ನೀವಿಲ್ಲಿ, ಇಲ್ಲಿ, ಇಲ್ಲಿ ಇಲ್ಲಿ ನೋಡಬಹುದು
ಫ್ಯಾಕ್ಟ್‌ಚೆಕ್
ವೈರಲ್ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್‌ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್‌ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್‌ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು.
ಈ ವಿಡಿಯೋವಿನಲ್ಲಿ ಗಮನಿಸುವುದಾದರೆ, ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳು ದೃಶ್ಯಕ್ಕೆ ಹೊಂದಿಕೆಯಾಗದಿರುವುದು, ಜೊತೆಗೆ ಇಪ್ಪತ್ತು ಸೆಕೆಂಡುಗಳ ವೀಡಿಯೋದಲ್ಲಿ ಕೆಲವು ಗ್ರಾಮಸ್ಥರ ಅಸ್ವಾಭಾವಿಕ ನಿಶ್ಚಲತೆ ಮತ್ತು ವಿರೂಪಗೊಂಡ ಮುಖಗಳು, ಇದಲ್ಲದೆ, ಹಲವಾರು ಬಳಕೆದಾರರು #aiart, #aiillusion, #soraai ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿಕೊಂಡು ವೀಡಿಯೋವನ್ನು ಹಂಚಿಕೊಂಡಿರುವುದು ನಮ್ಮ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿತು. sora Ai ವೆಬ್‌ಸೈಟ್‌ನಲ್ಲಿ ಎಐ ರಚಿತ ಫೊಟೋಗಳನ್ನು ಮತ್ತು ವಿಡಿಯೋಗಳನ್ನು ರಚಿಸುವ ವೆಬ್‌ಸೈಟ್.
ವಿಡಿಯೋವಿನ ಕೆಲವು ಫ್ರೇಮ್‌ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು. ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 99% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 95.4 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.