ಫ್ಯಾಕ್ಟ್ಚೆಕ್: ದೆಹಲಿಯ ಪ್ಯಾಸೆಂಜರ್ ರೈಲು ಯಮುನಾ ನದಿಗೆ ಉರುಳಿ ಬಿದ್ದಿದೆ ಎಂದು ಎಐ ವಿಡಿಯೋ ಹಂಚಿಕೆ
ದೆಹಲಿಯ ಪ್ಯಾಸೆಂಜರ್ ರೈಲು ಯಮುನಾ ನದಿಗೆ ಉರುಳಿ ಬಿದ್ದಿದೆ ಎಂದು ಎಐ ವಿಡಿಯೋ ಹಂಚಿಕೆ

Claim :
ದೆಹಲಿಯಲ್ಲಿ ಪ್ಯಾಸೆಂಜರ್ ರೈಲು ಯಮುನಾ ನದಿಗೆ ಉರುಳಿ ಬಿದ್ದಿದೆFact :
ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ಯಾಸೆಂಜರ್ ರೈಲು ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋವಿನಲ್ಲಿ ನೀಲಿ ಬಣ್ಣದ ಎರಡು ಬೋಗಿಗಳು ಹಳಿಗಳಿಂದ ಹಾರಿ ನದಿ ಸೇತುವೆಗೆ ಡಿಕ್ಕಿ ಹೊಡೆಯುವುದನ್ನು ಇಲ್ಲಿ ತೋರಿಸಲಾಗಿದೆ. ಜನರು ಸೇತುವೆಯ ಕೆಳಗೆ ಮತ್ತು ಹಳಿತಪ್ಪಿದ ಬೋಗಿಯ ಮೇಲ್ಭಾಗದಲ್ಲಿ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಬೋಗಿಯ ಮುಂಭಾಗವು ನದಿಗೆ ಬಿದ್ದು ಬೆಂಕಿ ಹೊತ್ತಿಕೊಂಡಾಗ ಅಗಾಧವಾದ ಜ್ವಾಲೆಗಳು ಚಿಮ್ಮುವುದನ್ನು ನಾವಿಲ್ಲಿ ನೋಡಬಹುದು. ಇದು ಭಾರತದಲ್ಲಿ ಸಂಭವಿಸಿದ ಪ್ರಮುಖ ರೈಲ್ವೆ ಅಪಘಾತವನ್ನು ಚಿತ್ರಿಸುತ್ತದೆ ಎಂದು ಬಳಕೆದಾರರು ಹೇಳಿಕೊಂಡಿದ್ದಾರೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ಯಮುನಾ ನದಿಯ ಮೇಲೆ ಪ್ರಯಾಣಿಕ ರೈಲು ಹಳಿತಪ್ಪಿ ಹಲವಾರು ಸಾವುನೋವುಗಳಿಗೆ ಕಾರಣವಾಗಿದೆ. ಹಲವಾರು ಜನರು ರೈಲಿನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಸಹ ನಾವೀ ವಿಡಿಯೋದಲ್ಲಿ ನೋಡಬಹುದು ಎಂದು ಸಾಮಾಜಿಕ ಜಾಲತಾಣದ ಬಳಕೆದಾರರು ಶೀರ್ಷಿಕೆಯನ್ನಿಡಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ರೈಲು ಅಪಘಾತದ ವಿಡಿಯೋವನ್ನು ಹಂಚಿಕೊಂಡು ʼदिल्ली जमुना जी में ट्रेन पलट गई अब क्या होगा कैसे बचेंगे है भगवान रक्षा करना ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼದೆಹಲಿ-ಜಮುನಾದಲ್ಲಿ ರೈಲು ಪಲ್ಟಿ, ಈಗ ಏನಾಗುತ್ತದೆ, ನಾವು ಹೇಗೆ ಬದುಕುಳಿಯುತ್ತೇವೆ, ದೇವರೇ ದಯವಿಟ್ಟು ನಮ್ಮನ್ನು ರಕ್ಷಿಸು.ʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಜೂನ್ 09, 2025ರಂದು ಯೂಟ್ಯೂಬ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ರೈಲು ನದಿಗೆ ಉರುಳುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ಘಟನೆ ದೆಹಲಿಯಲ್ಲಿ ನಡೆದಿದ್ದು, ಪ್ಯಾಸೆಂಜರ್ ರೈಲು ಯಮುನಾ ನದಿಗೆ ಉರುಳಿ ಬಿದ್ದಿದ್ದು, ಹಲವಾರು ಸಾವುಗಳಿಗೆ ಕಾರಣವಾಗಿದೆ ಎಂದು ಬಳಕೆದಾರರು ಹೇಳಿಕೊಂಡಿದ್ದಾರೆ. ʼaisi mushkil sar per padi maut mare path mein khadi haiʼ ಎಂಬ ಶೀರ್ಷಿಕೆಯನ್ನೀಡಿ ರೈಲು ಅಪಘಾತದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಫೇಸ್ಬುಕ್ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡು ʼट्रेन हादसा fecebook reels videoʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼರೈಲು ಅಪಘಾತದ ಫೇಸ್ಬುಕ್ ರೀಲ್ಸ್ ವಿಡಿಯೋʼ ಎಂದು ಬರೆದಿರುವುದನ್ನು ನಾವಿಲ್ಲಿ ನೋಡಬಹುದು. ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು.
ವೈರಲ್ ಆದ ಮತ್ತಷ್ಟು ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು.
ಫ್ಯಾಕ್ಟ್ಚೆಕ್
ವೈರಲ್ ಆದ ಸುದ್ದಿ ಸಾಮಾಜಿಕ ಜಾಲತಾಣದ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋವಿನ ಬಗ್ಗೆ ಸತ್ಯಾಂಶವನ್ನು ತಿಳಿಯಲು ವಿಡಿಯೋವಿನ ಕೆಲವು ಪ್ರಮುಖ ಕೀಫ್ರೇಮ್ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ, ಇದೇ ವಿಡಿಯೋವನ್ನು ಸಾಕಷ್ಟು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿರುವುದನ್ನು ನಾವು ಕಂಡುಕೊಂಡೆವು. ನಂತರ ನಾವು ದೆಹಲಿಯಲ್ಲಿ ಪ್ಯಾಸೆಂಜರ್ ರೈಲು ಹಳಿತಪ್ಪಿ ಯಮುನಾ ನದಿಗೆ ಬಿದ್ದ ಬಗ್ಗೆ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳಿವೆಯೇ ಎಂದು ಪರಿಶೀಲಿಸಲು ನಾವು ಗೂಗಲ್ನಲ್ಲಿ ವಿವಿಧ ಕೀವರ್ಡ್ಗಳ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಘಟನೆಯನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳನ್ನು ಸಿಗಲಿಲ್ಲ. ಒಂದು ವೇಳೆ ಅಪಘಾತ ಸಂಭವಿಸಿದ್ದರೆ, ಮಾಧ್ಯಮಗಳಲ್ಲಿ ಅಥವಾ ಪತ್ರಿಕೆಗಳಲ್ಲಿ ಈ ವಿಷಯದ ಕುರಿತು ವರದಿಯಾಗುತ್ತಿತ್ತು.
ನಂತರ ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳು ವಿಡಿಯೋವಿನ ಕೆಲವು ಫ್ರೇಮ್ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 96% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಈ ಮಾಹಿತಿಯನ್ನು ಮತ್ತಷ್ಟು ಖಚಿತ ಪಡಿಸಿಕೊಳ್ಳಲು ನಾವು ಎಐ ಇಮೇಜ್ ಡಿಟೆಕ್ಷನ್ ಟೂಲ್ ʼಹೈವ್ ಮಾಡರೇಶನ್ʼ ನಲ್ಲಿ ಫೊಟೋವನ್ನು ಪರಿಶೀಲಿಸಿದೆವು. ಪರಿಶೀಲನೆಯಲ್ಲಿ ನಮಗೆ ಈ ಚಿತ್ರ 81% ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ತಿಳಿದುಬಂದಿತು.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.