ಫ್ಯಾಕ್ಟ್ಚೆಕ್: ನರೇಂದ್ರ ಮೋದಿ ಅಹಮದಾಬಾದ್ ವಿಮಾನದ ಅವಶೇಷಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಎಐ ವಿಡಿಯೋ ಹಂಚಿಕೆ
ನರೇಂದ್ರ ಮೋದಿ ಅಹಮದಾಬಾದ್ ವಿಮಾನದ ಅವಶೇಷಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಎಐ ವಿಡಿಯೋ ಹಂಚಿಕೆ

Claim :
ನರೇಂದ್ರ ಮೋದಿ ಅಹಮದಾಬಾದ್ ವಿಮಾನದ ಅವಶೇಷಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆFact :
ವೈರಲ್ ಆದ ಚಿತ್ರವನ್ನು ಎಐ ಮೂಲಕ ರಚಿಸಲಾಗಿದೆ
ಜೂನ್ 12 ರಂದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ಗೆ 242 ಜನರನ್ನು ಹೊತ್ತು ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI171, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಮತ್ತೆಲ್ಲರೂ ಮೃತಪಟ್ಟಿದ್ದಾರೆ. ಅಲ್ಲದೇ ಈ ಅಪಘಾತದ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಇನ್ನೂ ಏರ್ ಇಂಡಿಯಾ ದುರಂತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಆದ್ರೆ ಕೆಲವರು ಇದು ಇಂಜಿನ್ ಸಮಸ್ಯೆ ಎಂದು ಹೇಳಿದರೆ, ಇನ್ನೂ ಕೆಲವರು ಪೈಲಟ್ ಸಮಸ್ಯೆ, ಲ್ಯಾಂಡಿಂಗ್ ಗೇರ್ ಸಮಸ್ಯೆ ಅಂತಾನೂ ಹೇಳುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ಮೋದಿ ಅವರು ಜೂನ್ 13, 2025 ಶುಕ್ರವಾರದಂದು ಅಹಮದಾಬಾದ್ಗೆ ಭೇಟಿ ನೀಡಿದ್ದು, ವಿಮಾನ ಅಪಘಾತ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಹೊಸದಿಲ್ಲಿಯಿಂದ ಅಹಮದಾಬಾದ್ಗೆ ಬಂದಿಳಿದ ಪ್ರಧಾನಿ ಮೋದಿ, ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಿಂದ ಅಹಮದಾಬಾದ್ಗೆ ಬಂದಿಳಿದ ಪ್ರಧಾನಿ ಮೋದಿ, ನೇರವಾಗಿ ಏರ್ ಇಂಡಿಯಾ ವಿಮಾನ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ನಡೆದ ಸ್ಥಳ ಮತ್ತು ಅಪಘಾತದಿಂದ ಹಾನಿಗೊಳಗಾದ ಹಾಸ್ಟೇಲ್ ಪ್ರದೇಶವನ್ನು ಪ್ರಧಾನಿ ಮೋದಿ ಪರಿಶೀಲಿಸಿದರು. ವಿಮಾನ ಅಪಘಾತ ಸ್ಥಳದಿಂದ ಅವಶೇಷಗಳನ್ನು ವಿಮಾನ ನಿಲ್ದಾಣದ ಆವರಣದಲ್ಲಿರುವ ಗುಜರಾತಿನ ರಾಜ್ಯ ವಿಮಾನಯಾನ ಮೂಲಸೌಕರ್ಯ ಕಂಪನಿ ಲಿಮಿಟೆಡ್ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.
ಜೂನ್ 12 ರಂದು ಅಹಮದಾಬಾದ್ನ ಮೇಘನಾನಿ ನಗರ ಪ್ರದೇಶದಲ್ಲಿರುವ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನಗೊಂಡ ಏರ್ ಇಂಡಿಯಾ ವಿಮಾನದ ಅವಶೇಷಗಳನ್ನು ಸ್ಥಳದಿಂದ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಗುಜರಾತ್ ಪೊಲೀಸರು ಭಾನುವಾರ ಪ್ರಾರಂಭಿಸಿದ್ದಾರೆ. ಈ ಭೀಕರ ಅಪಘಾತವು ವಾಯು ಸುರಕ್ಷತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ, ಜೊತೆಗೆ ನಗರ ಪ್ರದೇಶಗಳಲ್ಲಿನ ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ವಸಾಹತುಗಳ ಸುರಕ್ಷತೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ.
ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ನ ಅಹಮದಾಬಾದ್ ನಗರದಿಂದ ಲಂಡನ್ಗೆ ಹೋಗುತ್ತಿದ್ದ ವಿಮಾನ ಅಪಘಾತಕ್ಕೀಡಾದ ನಂತರ ಘಟನಾ ಸ್ಥಳದಲ್ಲಿ ಸಿಕ್ಕ ವಿಮಾನದ ಅವಶೇಷಗಳನ್ನು ಹೊತ್ತು ಹೋಗುತ್ತಿರುವುದನ್ನು ನೋಡಬಹುದು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಶೀರ್ಷಿಕೆಯನ್ನೀಡಿ ಹಂಚಿಕೊಳ್ಳಲಾಗುತ್ತಿದೆ.
ಜೂನ್ 13, 2025ರಂದು ಎಕ್ಸ್ ಖಾತೆದಾರರೊಬ್ಬರು ʼअच्छा चलता हूं ... इलेक्शन मैं याद रखना !ʼ ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿರುವುದನ್ನು ನಾವಿಲ್ಲಿ ನೋಡಬಹುದು. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಈಗ ನಾನು ಹೋಗುತ್ತೇನೆ, ಚುನಾವಣೆ ಸಮಯದಲ್ಲಿ ಮತ್ತೆ ಸಿಗುತ್ತೇನೆʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)

ಯೂಟ್ಯೂಬ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ́AHEMDABAD PLAN CRASHES 🥺#shorts #trending #viralshortsʼ ಎಂದು ಬರೆದು ಹಂಚಿಕೊಂಡಿರುವುದನ್ನು ನಾವಿಲ್ಲಿ ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)

ಮತ್ತೊಂದು ಯೂಟ್ಯೂಬ್ ಖಾತೆಯಲ್ಲಿ ವೈರಲ್ ಆದ ವಿಡಿಯೋವನ್ನು ಹಂಚಿಕೊಂಡು ʼAn old man is collecting some scrap metal and taking it tosell.#comedy #funny #shorts #masumbillahbmʼ ಎಂದು ಬರೆದಿರುವುದನ್ನು ನಾವಿಲ್ಲಿ ನೋಡಬಹುದು. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಮುದುಕನೊಬ್ಬ ಲೋಹದ ತುಂಡುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾನೆʼ ಎಂಬ ಶಿರ್ಷಿಕೆಯೊಂದಿಗೆ ಹಂಚಿಕೊಂಡಿರುವುದನ್ನು ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)

ಇನ್ನು ಕೆಲವು ಯೂಟ್ಯೂಬ್ ಖಾತೆಯಲ್ಲಿ ʼaircraft ke bare mein kya bole Modi ji ji#aircraft#sad #modi #pmmodibiopicʼ ಎಂದು ಮತ್ತೋಬ್ಬರು ʼAeroplane Crash होने के बाद ये क्या हुआ!ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೋಡಬಹುದು. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼವಿಮಾನದ ಬಗ್ಗೆ ಮೋದಿ ಜಿ ಹೇಳಿದ್ದೇನು? #ವಿಮಾನ #ಸಾದ್ #ಮೋದಿ #PMODBOPISʼ ಎಂದು ಒಬ್ಬರು (ಆರ್ಕೈವ್) ಮತ್ತೋಬ್ಬರು ʼವಿಮಾನ ಪತನವಾದ ನಂತರ ಏನಾಯಿತು!ʼ ಎಂದು ಬರೆದು ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೋಡಬಹದು. (ಆರ್ಕೈವ್)
ಜೂನ್ 15, 2025ರಂದು ಇನ್ಸ್ಟಾಗ್ರಾಮ್ ಖಾತೆದಾರರೊಬ್ಬರು ʼपक्का कोई पाकिस्तानी ही होगा जो भारत के लिए लाइक शेयर और फॉलो नहीं करेगा।ʼ ಎಂಬ ಕ್ಯಾಪ್ಷನ್ ನೀಡಿ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೋಡಬಹುದು. ಶಿರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಕೇವಲ ಪಾಕಿಸ್ತಾನಿ ಆದವ ಮಾತ್ರ ಈ ವಡಿಇಯೋವನ್ನು ಹಂಚಿಕೊಳ್ಳುವುದಿಲ್ಲʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)

ಫ್ಯಾಕ್ಟ್ಚೆಕ್
ವೈರಲ್ ಆದ ವಿಡಿಯೋ ಸಾಮಾಜಿಕ ಜಾಲತಾಣದ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್ಗಲನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳಕ್ಕೆ ನರೇಂದ್ರ ಮೋದಿ ಭೇಟಿʼ ಎಂಬ ಕೀವರ್ಡ್ಗ ಮೂಲಕ ಹುಡುಕಾಟ ನಡೆಸಿದಾಗ ನಮಗೆ ಕೆಲವು ಮಾಧ್ಯಮ ವರದಿಗಳು ದೊರೆಯಿತು.

ಜೂನ್ 15, 2025ರಂದು ʼಈಟಿವಿ ಭಾರತ್ʼ ವೆಬ್ಸೈಟ್ನಲ್ಲಿ ʼವಿನಾಶಕಾರಿ.. ಹೃದಯವಿದ್ರಾವಕ' ಘಟನೆ ಎಂದ ಪ್ರಧಾನಿ ಮೋದಿ: ದುರಂತ ಸ್ಥಳದ ಪರಿಶೀಲನೆ, ಗಾಯಾಳುಗಳಿಗೆ ಸಾಂತ್ವನ - AHMEDABAD PLANE CRASHʼ ಎಂಬ ಶೀರ್ಷಿಕೆಯೊಂದಿಗೆ ವದರಿ ಮಾಡಿರುವುದನ್ನು ನೋಡಬಹುದು. ವರದಿಯಲ್ಲಿ ಏರ್ ಇಂಡಿಯಾ ವಿಮಾನ ಪತನವಾದ ಸ್ಥಳಕ್ಕೆ ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ಪ್ರಧಾನಿ ಮಾತುಕತೆ ನಡೆಸಿದರು.ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು, ಅವಘಡದಲ್ಲಿ ಪವಾಡಸದೃಶವಾಗಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಶ್ಕುಮಾರ್ ರಮೇಶ್ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರುʼ ಎಂದು ವರದಿಯಾಗಿದೆ.

ಜೂನ್ 13, 2025ರಂದು ʼಸುವರ್ಣ ನ್ಯೂಸ್ʼ ಯೂಟ್ಯೂಬ್ ಚಾನೆಲ್ನಲ್ಲಿ ʼPM Modi Visits Ahmedabad Plane Crash Site | ವಿಮಾನ ದುರಂತ ಸ್ಥಳಕ್ಕೆ ಮೋದಿ ಭೇಟಿʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಹಮದಾಬಾದ್ ಬಳಿ ಸಂಭವಿಸಿದ ಭೀಕರ ವಿಮಾನ ದುರಂತ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ತೀವ್ರತೆಯನ್ನು ಅರಿತ ಪ್ರಧಾನಿ, ತಕ್ಷಣವೇ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಪ್ರಗತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರುʼ ಎಂದು ವರದಿ ಮಾಡಿರುವುದನ್ನಿ ನೀವಿಲ್ಲಿ ನೋಡಬಹುದು
ಜೂನ್ 13, 2025ರಂದು ʼಎಎನ್ಐʼ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ʼ#WATCH | PM Modi visited the #AirIndiaCrash site and assessed the ground situation todayʼ ಎಂಬ ಶೀರ್ಷಿಕೆಯೊಂದಿಗೆ ಮೋದಿಯವರು ಏರ್ ಇಂಡಿಯಾ ವಿಮಾನ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಮಯದ ವಿಡಿಯೋವನನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳ ವಿಡಿಯೋವಿನ ಕೆಲವು ಫ್ರೇಮ್ಗಳಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 97% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.

ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.

ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.