ಫ್ಯಾಕ್ಟ್ಚೆಕ್: ಹಿಮ ಚಿರತೆಯೊಂದು ತನ್ನ ಮರಿಯನ್ನು ರಕ್ಷಿಸಲು ಮನುಷ್ಯನ ಸಹಾಯವನ್ನು ಕೇಳಿತು ಎಂದು ಎಐ ವಿಡಿಯೋ ಹಂಚಿಕೆ
ಹಿಮ ಚಿರತೆಯೊಂದು ತನ್ನ ಮರಿಯನ್ನು ರಕ್ಷಿಸಲು ಮನುಷ್ಯನ ಸಹಾಯವನ್ನು ಕೇಳಿತು ಎಂದು ಎಐ ವಿಡಿಯೋ ಹಂಚಿಕೆ

Claim :
ಹಿಮ ಚಿರತೆಯೊಂದು ತನ್ನ ಮರಿಯನ್ನು ರಕ್ಷಿಸಲು ಮನುಷ್ಯನ ಸಹಾಯವನ್ನು ಕೋರಿತುFact :
ವೈರಲ್ ಆದ ವಿಡಿಯೋವನ್ನು ಎಐ ಬಳಸಿ ರಚಿಸಲಾಗಿದೆ.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಹಿಮ ಚಿರತೆಯೊಂದು ತನ್ನ ಮರಿಯನ್ನು ರಕ್ಷಿಸಲು ಮನುಷ್ಯನ ಸಹಾಯ ಕೋರಿದ ವಿಡಿಯೋವೊಂದು ವೈರಲ್ ಆಗುತ್ತಿದೆ.
ಜನವರಿ 28, 2026ರಂದು ಇನ್ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼIn the middle of a brutal blizzard, fear turned into something no one 15 expected. An adult snow leopard approached a human, not to attack, but to lead them toward a cliff where her cub was fighting for life. In that frozen silence, instinct met trust, and a moment meant for terror became one of pure humanity. Sometimes, even in the wild, life finds a way to ask for help, and reminds us that compassion can cross every boundary" ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹಾಗೆ ವಿಡಿಯೋವಿಗೆ ಕ್ಯಾಪ್ಷನ್ ಆಗಿ ʼA terrifying moment turns emotional as snow leopard seeks. human help for her cubʼ ಎಂದು ಬರೆದಿರುವುದನ್ನು ನೋಡಬಹುದು. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಭಾರೀ ಹಿಮಪಾತ ನಡೆಯುತ್ತಿದ್ದ ಸಮಯದಲ್ಲಿ ಒಂದು ಅದ್ಭುತ ಘಟನೆ ನಡೆದಿದೆ. ಸಾಮಾನ್ಯವಾಗಿ ಮನುಷ್ಯರು ಭಯಪಡುವಂತಹ ಹಿಮ ಚಿರತೆ ಒಂದು ಮನುಷ್ಯನ ಬಳಿ ಬಂದಿತು. ಎಲ್ಲರೂ ಅದು ದಾಳಿ ಮಾಡುತ್ತದೆ ಎಂದು ಭಾವಿಸುತ್ತಾರೆ, ಆದರೆ ಹಾಗಾಗಲಿಲ್ಲ. ಆ ಹಿಮ ಚಿರತೆ ತನ್ನ ಮರಿ ಅಪಾಯದಲ್ಲಿದೆ ಎಂದು ತಿಳಿದಂತೆ, ಮನುಷ್ಯನನ್ನು ಒಂದು ಬಂಡೆಯ ಕಡೆಗೆ ಕರೆದುಕೊಂಡು ಹೋಯಿತು. ಅಲ್ಲಿ ಅದರ ಮರಿ ಜೀವಕ್ಕಾಗಿ ಹೋರಾಡುತ್ತಿತ್ತು. ತೀವ್ರ ಚಳಿಯಲ್ಲೂ ಹಾಗೂ ಅಪಾಯದ ನಡುವೆಯೂ, ಆ ತಾಯಿ ಚಿರತೆ ಭಯವನ್ನು ಬಿಟ್ಟು ನಂಬಿಕೆಯನ್ನು ಆಯ್ಕೆ ಮಾಡಿತು. ಇದು ಭಯಾನಕವಾಗಿರ ಬೇಕಾದ ಕ್ಷಣ, ಆದರೆ, ತುಂಬಾ ಭಾವನಾತ್ಮಕ ಮತ್ತು ಹೃದಯಸ್ಪರ್ಶಿ ಕ್ಷಣವಾಯಿತು. ಈ ಘಟನೆ ನಮಗೆ ಏನು ಹೇಳುತ್ತದೆ. ಕಾಡಿನ ಪ್ರಾಣಿಗಳಿಗೂ ಸಹ ಮಮತೆ ಇದೆ, ಅವುಗಳೂ ಸಹ ತಮ್ಮ ಮಕ್ಕಳಿಗಾಗಿ ಸಹಾಯ ಕೇಳಬಹುದು. ಈ ಘಟನೆ ಕರುಣೆ ಮತ್ತು ಮಾನವೀಯತೆ ಮನುಷ್ಯರಿಗೆ ಮಾತ್ರ ಸೀಮಿತವಲ್ಲ ಎಂಬುದನ್ನು ನೆನಪಿಸುತ್ತದೆ. ಸಹಾನುಭೂತಿ ಯಾವ ಗಡಿಗೂ ಒಳಪಟ್ಟಿಲ್ಲ ಮನುಷ್ಯ ಮತ್ತು ಕಾಡುಪ್ರಾಣಿಗಳ ನಡುವೆ ಕೂಡʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್)
ಜನವರಿ 29, 2026ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼʼA terrifying moment turns emotional as snow leopard seeks. human help for her cubʼ ಎಂದು ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೋಡಬಹುದು. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಒಂದು ಭಯಾನಕ ಕ್ಷಣ ಭಾವನಾತ್ಮಕವಾಯಿತು. ಹಿಮ ಚಿರತೆಯೊಂದು ತನ್ನ ಮರಿಗಾಗಿ ಮನುಷ್ಯನ ಸಹಾಯವನ್ನು ಕೇಳುತ್ತದೆʼ ಎಂದು ಬರೆದಿರುವುದನ್ನು ನೋಡಬಹುದು
ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು (ಆರ್ಕೈವ್)
ಫ್ಯಾಕ್ಟ್ಚೆಕ್
ವೈರಲ್ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿದ ಕೆಲವು ಕೀವರ್ಡ್ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಆದರೆ, ಈ ಘಟನೆಗೆ ಸಂಬಂಧಿಸಿದ ಯಾವುದೇ ವಿಶ್ವಾಸರ್ಹ ವರದಿ ನಮಗೆ ಕಂಡುಬಂದಿಲ್ಲ. ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು.
ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 96% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 97.2 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼವಾಸ್ ಇಟ್ ಎಐʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

