ಫ್ಯಾಕ್ಟ್ಚೆಕ್: ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕ್ ಡ್ರೋನ್ಗಳು ಭಾರತದೊಳಗೆ 700 ಕಿ.ಮೀ ಪ್ರಯಾಣಿಸಿವೆ ಎಂದು ಸುಳ್ಳು ಸುದ್ದಿ ಹಂಚಿಕೆ
ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕ್ ಡ್ರೋನ್ಗಳು ಭಾರತದೊಳಗೆ 700 ಕಿ.ಮೀ ಪ್ರಯಾಣಿಸಿವೆ ಎಂದು ಸುಳ್ಳು ಸುದ್ದಿ ಹಂಚಿಕೆ

Claim :
ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನದ ಡ್ರೋನ್ಗಳು ಭಾರತದೊಳಗೆ 700 ಕಿ.ಮೀ. ಪ್ರಯಾಣಿಸಿದವುFact :
ವೈರಲ್ ಪೊಸ್ಟ್ನ್ನು ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಇವರಲ್ಲಿ 25 ಭಾರತೀಯರಾಗಿದ್ದರೆ, ಒಬ್ಬರು ನೇಪಾಳಿ ಪ್ರಜೆಯಾಗಿದ್ದರು. ಈ ಅಮಾನುಷ ಕೃತ್ಯಕ್ಕೆ ಪ್ರತಿಕಾರವಾಗಿ ಭಾರತವು ಮೇ 7ರಂದು ಮುಂಜಾನೆ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳ ಮೇಲೆ ಕ್ಷಿಪಣಿದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಶ್ - ಎ - ಮೊಹಮ್ಮದ್ ಹಾಗೂ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿತ್ತು. ಭಾರತವು ತನ್ನ ದಾಳಿಯನ್ನು ನಿಖರ, ಸೀಮಿತ ಮತ್ತು ಉಲ್ಬಣಗೊಳ್ಳದ ಕಾರ್ಯಚರಣೆ ಎಂದು ಹೇಳಿದ್ದು, ಇದರಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪಾಕಿಸ್ತಾನಕ್ಕೆ ವಿಶ್ವಮಟ್ಟದಲ್ಲಿ ಮುಖಭಂಗ ಉಂಟು ಮಾಡಿದೆ. ಭಾರತದ ಹೊಡೆತಕ್ಕೆ ನಲುಗಿರುವ ಪಾಕ್ ಸೇನೆಯು ಹಸಿ ಸುಳ್ಳುಗಳನ್ನೇ ಆಹಾರವನ್ನಾಗಿ ಮಾಡಿಕೊಂಡು, ಮಾನ ಉಳಿಸಿಕೊಳ್ಳಲು ಹೆಣಗಾಡುತ್ತಿದೆ.
ಭಾರತ ಇತ್ತೀಚೆಗೆ ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ್ ಕುರಿತು ಪೋಸ್ಟ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲೂ ಮುಖ್ಯವಾಗಿ ಎಕ್ಸ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಜುಲೈ 17, 2025ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼ🚨BREAKING: According to some reports Pakistan’s drones went 700km inside India during the warʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ “ಬ್ರೇಕಿಂಗ್: ಯುದ್ಧದ ಸಮಯದಲ್ಲಿ ಪಾಕಿಸ್ತಾನದ ಡ್ರೋನ್ಗಳು ಭಾರತೀಯ ಭೂಪ್ರದೇಶದೊಳಗೆ 700 ಕಿ.ಮೀ. ಹಾರಿದವು ಎಂದು ಕೆಲವು ವರದಿಗಳು ಹೇಳುತ್ತಿದ್ದಾವೆ” ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಜುಲೈ 17, 2025ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಯುದ್ಧದ ಸಮಯದಲ್ಲಿ ಪಾಕಿಸ್ತಾನದ ಡ್ರೋನ್ಗಳು ಭಾರತೀಯ ಭೂಪ್ರದೇಶದೊಳಗೆ 700 ಕಿ.ಮೀ. ಹಾರಿದವು ಎಂದು ಕೆಲವು ವರದಿಗಳು ಹೇಳುತ್ತಿದ್ದಾವೆʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್ ಮಾಡಿದ್ದಾರೆ.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಜುಲೈ 17, 2025ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼʼAccording to Security Sources, Pakistani kamikaze drones went more than 600km inside India during recent conflictʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್ ಮಾಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಭದ್ರತಾ ಮೂಲಗಳ ಪ್ರಕಾರ, ಇತ್ತೀಚಿನ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನದ ಕಾಮಿಕೇಜ್ ಡ್ರೋನ್ಗಳು ಭಾರತದೊಳಗೆ 600 ಕಿ.ಮೀ.ಗಿಂತ ಹೆಚ್ಚು ದೂರ ಹೋದವು.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಇದೇ ರೀತಿಯ ಹಲವರು ಪೋಸ್ಟ್ಗಳನ್ನು ಹಂಚಿಕೊಂಡಿದ್ದು, ಇದರಲ್ಲಿ ಕೆಲ ಪಾಕಿಸ್ತಾನಿ ಸಾಮಾಜಿಕ ಜಾಲತಾಣಗಳ ಬಳಕೆದಾರರು ಭಾರತದ ವಿರುದ್ಧ ಉದ್ದೇಶಪೂರ್ವಕವಾಗಿ ಈ ರೀತಿಯ ಆಧಾರ ರಹಿತ ಹಲವು ಸುದ್ದಿಗಳನ್ನು ಹಂಚಿಕೊಂಡಿರುವುದು ಕಂಡು ಬಂದಿದೆ. ಇದನ್ನೇ ಬಳಸಿಕೊಂಡು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ವಿವಿಧ ರೀತಿಯ ನಕಾರಾತ್ಮಕ ಅಭಿಪ್ರಾಯವನ್ನು ಭಿತ್ತುವ ಕೆಲಸವನ್ನು ಪಾಕಿಸ್ತಾನ ಮಾಡಿದೆ. ಮತ್ತಷ್ಟು ವೈರಲ್ ಆದ ಪೊಸ್ಟ್ಗಳನ್ನು ನೀವಿಲ್ಲಿ ನೋಡಬಹುದು.
ಫ್ಯಾಕ್ಟ್ಚೆಕ್
ವೈರಲ್ ಆದ ಪೊಸ್ಟ್ನಲ್ಲಿ ಯಾವುದೇ ಸತ್ಯಾಂಶವಿಲ್ಲ. ಭಾರತದ ಭೂಪ್ರದೇಶದ ಒಳಗೆ ಪಾಕಿಸ್ತಾನದ ಡ್ರೋನ್ ಸುಮಾರು 700ಕಿ.ಮೀ ವರೆಗೂ ಸಂಚರಿಸಿದೆ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ವೈರಲ್ ಆಗುತ್ತಿರುವ ಪೋಸ್ಟ್ ಯಾವುದೇ ಸಾಕ್ಷಿ ಆಧಾರಗಳಿಲ್ಲದೆ ಕೇವಲ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.
ವೈರಲ್ ಆದ ಸುದ್ದಿಯಲ್ಲಿರುವ ಸತ್ಯಾಂಶವನ್ನು ತಿಳಿಯಲು ನಾವು ಕೀ ವರ್ಡ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಹುಡುಕಾಟದಲ್ಲಿ ನಮಗೆ, ಜುಲೈ 16, 2025ರಂದು ಪ್ರಕಟವಾದ ʼದಿ ಎಕನಾಮಿಕ್ ಟೈಮ್ಸ್ʼನ ವೆಬ್ಸೈಟ್ನಲ್ಲಿ ʼAfter Op Sindoor pause, Pakistani smugglers restart dropping drugs by drones deeper into Punjabʼ ಎಂಬ ಶೀರ್ಷಿಕೆಯೊಂದಿಗೆ ವರದಿ ಮಾಡಿರುವುದನ್ನು ನೋಡಬಹುದು. ವರದಿಯಲ್ಲಿ “ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನ ತನ್ನ ಕೊಳಕು ತಂತ್ರಗಳಿಗೆ ಮರಳಿದೆ, ಪಂಜಾಬ್ನಲ್ಲಿ ಡ್ರೋನ್ ಮೂಲಕ ಡ್ರಗ್ ಡ್ರಾಪ್ಗಳನ್ನು ಪುನರಾರಂಭಿಸಿದೆ”. ಇತ್ತೀಚೆಗೆ, ಡ್ರೋನ್ಗಳು ಭಾರತದ ಗಡಿರೇಖೆಯನ್ನು ಸುಮಾರು 2 ರಿಂದ 2.5 ಕಿಲೋಮೀಟರ್ ವರೆಗೆ ಹಾರುವುದು ಕಂಡು ಬಂದಿದೆ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಆದರೆ ಇದು ಆಪರೇಷನ್ ಸಿಂಧೂರ್ ನಂತರ ಎಂಬುದು ಗಮನಿಸಬೇಕಾದ ಅಂಶವಾಗಿದೆ.
ಜುಲೈ 17, 2025ರಂದು ಟೈಮ್ಸ್ ಆಫ್ ಇಂಡಿಯಾ ವೆಬ್ಸೈಟ್ನಲ್ಲಿ ʼPakistani drones back, pushing drugs & guns into Indiaʼ ಎಂಬ ಶೀರ್ಷಿಕೆಯನ್ನು ವರದಿಯನ್ನು ಹಂಚಿಂಡಿದ್ದಾರೆ. ವರದಿಯಲ್ಲಿ ʼಪಾಕಿಸ್ತಾನದ ಡ್ರೋನ್ಗಳು ಭಾರತಕ್ಕೆ ಬಂದೂಕುಗಳು ಮತ್ತು ಮಾದಕವಸ್ತುಗಳನ್ನು ಸಾಗಿಸಲು ಯತ್ನಿಸಿವೆ ” ಎಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಕಂಡು ಬಂದಿದೆ. ಇದರಲ್ಲೂ ಕೂಡ ಪಾಕಿಸ್ತಾನಿ ಡ್ರೋನ್ಗಳು ವಾಸ್ತವವಾಗಿ 2 ಕಿ.ಮೀ ನಿಂದ 2.5 ಕಿ.ಮೀಗಿಂತ ಸ್ವಲ್ಪ ಹೆಚ್ಚು ಭಾರತದೊಳಗೆ ನುಸುಳಲು ಯತ್ನಿಸಿದೆ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಆದರೆ ಇದು ಕೂಡ ಆಪರೇಷನ್ ಸಿಂಧೂರ್ ನಂತರದ ವರದಿಯಾಗಿರುವುದರಿಂದ ವೈರಲ್ ಪೋಸ್ಟ್ ಸುಳ್ಳಾಗಿದೆ. ಹಾಗೆಯೇ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಒಳಗೆ ಪಾಕ್ ಡ್ರೋನ್ಗಳು 300 ಕಿ.ಮೀ ಸಂಚರಿಸಿರುವ ಕುರಿತು ಯಾವುದೇ ವರದಿಗಳು ಮತ್ತು ಅಧಿಕೃತ ಮಾಹಿತಿಯು ಲಭ್ಯವಾಗಿಲ್ಲ.
ಇದರಿಂದ ಸಾಭೀತಾಗಿದ್ದೇನೆಂದರೆ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಭಾರತದ ಭೂಪ್ರದೇಶದ ಒಳಗೆ ಪಾಕಿಸ್ತಾನದ ಡ್ರೋನ್ ಸುಮಾರು 700 ಕಿ.ಮೀ ವರೆಗೂ ಸಂಚರಿಸಿದೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ಆಗುತ್ತಿರುವ ಪೋಸ್ಟ್ ಯಾವುದೇ ಸಾಕ್ಷಿ ಆಧಾರಗಳಿಲ್ಲದೆ ಕೇವಲ ಸುಳ್ಳು ನಿರೂಪಣೆಯನ್ನು ಹೊಂದಿದೆ.

