ಫ್ಯಾಕ್ಟ್ಚೆಕ್: ಲಾರೆನ್ಸ್ ಬಿಷ್ಣೋಯ್ ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಾರೆ ಎಂದು 2020ರ ವಿಡಿಯೊ ಹಂಚಿಕೆ
ಲಾರೆನ್ಸ್ ಬಿಷ್ಣೋಯ್ ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಾರೆ ಎಂದು 2020ರ ವಿಡಿಯೊ ಹಂಚಿಕೆ

Claim :
ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಾರೆ.Fact :
ವೈರಲ್ ಆದ ವಿಡಿಯೋ ಇತ್ತೀಚಿನದಲ್ಲ 2020ರದ್ದು.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗುತ್ತಿರುವ ವೀಡಿಯೊವೊಂದರಲ್ಲಿ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿರುವುದನ್ನು ತೋರಿಸಲಾಗಿದೆ. ವೀಡಿಯೊದಲ್ಲಿ ದರೋಡೆಕೋರನಿಗೆ ಪೊಲೀಸ್ ಅಧಿಕಾರಿಗಳು ಬೆಂಗಾವಲು ನೀಡುತ್ತಿರುವುದನ್ನು ತೋರಿಸಲಾಗಿದೆ .
ನವಂಬರ್ 26, 2025ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼLawrence Bishnoi got Bailʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ನವಂಬರ್ 27, 2025ರಂದು ಇನ್ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಲಾರೆನ್ಸ್ #ಬಿಷ್ಣೋಯ್ ಜಾಮೀನು ಪಡೆದಿದ್ದಾರೆ, ಸನಾತನ ಧರ್ಮದ ವಿರೋಧಿಗಳೇ, ದಯವಿಟ್ಟು ಎಚ್ಚರಿಕೆಯಿಂದ ಮಾತನಾಡಿʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್ವೊಂದನ್ನು ಮಾಡಿದ್ದಾರೆ. ಪೊಸ್ಟ್ನಲ್ಲಿ ಕ್ಯಾಪ್ಷನ್ ಆಗಿ ʼಲಾರೆನ್ಸ್ ಬಿಷ್ಟೊಯ್ ದೇಶದ ಹಿಂದುತ್ವವಾದಿ ಗ್ಯಾಂಗಸ್ಟರ್ ತಿಹಾರ್ ಜೈಲ್-ನಿಂದ ಬಿಡುಗಡೆ ಹಿಂದೂ ವಿರೋಧಿಗಳಿಗೆ ದೇಶದ್ರೋಹಿಗಳಿಗೆ ನಡುಕʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ನವಂಬರ್ 27, 2025ರಂದು ಇನ್ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಲಾರೆನ್ಸ್ ಬಿಷ್ಣೋಯ್ ಜಾಮೀನು ಪಡೆದಿದ್ದಾರೆ, ಸನಾತನ ಧರ್ಮದ ವಿರೋಧಿಗಳೇ, ದಯವಿಟ್ಟು ಎಚ್ಚರಿಕೆಯಿಂದ ಮಾತನಾಡಿ.... Lion is Coming Soon.ʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್ವೊಂದನ್ನು ಮಾಡಿದ್ದಾರೆ.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ನವಂಬರ್ 27, 2025ರಂದು ಇನ್ಸ್ಟಾಗ್ರಾಮ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼಧರ್ಮ ವಿರೋಧಿಗಳಿಗೆ ನಡುಕು ಇವಾಗ ಶುರುʼ ಎಂಬ ಶೀರ್ಷಿಕೆಯೊಂದಿಗೆ ಪೊಸ್ಟ್ವೊಂದನ್ನು ಮಾಡಿದ್ದಾರೆ. ಪೊಸ್ಟ್ನಲ್ಲಿ ಕ್ಯಾಪ್ಷನ್ ಆಗಿ ʼಲಾರೆನ್ಸ್ ಬಿಷ್ಟೋಯ್ ಜಾಮೀನು ಪಡೆದಿದ್ದಾರೆ, ಸನಾತನ ಧರ್ಮದ ವಿರೋಧಿಗಳೇ, ದಯವಿಟ್ಟು ಎಚ್ಚರಿಕೆಯಿಂದ ಮಾತನಾಡಿʼ ಎಂದು ಬರೆದಿರುವುದನ್ನು ನೋಡಬಹುದು.
ವೈರಲ್ ಆದ ಪೊಸ್ಟ್ನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ನೋಡಬಹುದು. (ಆರ್ಕೈವ್)
ಫ್ಯಾಕ್ಟ್ಚೆಕ್
ವೈರಲ್ ಆದ ಪೋಸ್ಟ್ ಸಾಮಾಜಿಕ ಜಾಲತಾಣದ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವೈರಲ್ ಆದ ವಿಡಿಯೋ ಇತ್ತೀಚಿನದಲ್ಲ. 2020ರಲ್ಲಿ ಪ್ರಕರಣವೊಂದರಲ್ಲಿ ಫಜಿಲ್ಕಾ ನ್ಯಾಯಾಲಯಕ್ಕೆ ಲಾರೆನ್ಸ್ ಬಿಷ್ಣೋಯ್ ಹಾಜರು ಪಡಿಸಲಾಗಿದ್ದ ವೇಳೆ ಚಿತ್ರೀಕರಿಸಿದ ವೀಡಿಯೋವದು.
ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್ನಲ್ಲಿ ವಿಡಿಯೋವಿನ ಕೆಲವು ಕೀಫ್ರೇಮ್ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ ನಾವು ವೈರಲ್ ವಿಡಿಯೋವಿಗೆ ಸಂಬಂಧಿಸಿ ಲಾರೆನ್ಸ್ ಬಿಷ್ಣೋಯ್ಗೆ ಜಾಮೀನು ಸಿಕ್ಕ ಬಗ್ಗೆ ಕೀವರ್ಡ್ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ, ನವಂಬರ್ 20, 2025ರಂದು ʼಇಂಡಿಯನ್ ಎಕ್ಸ್ಪ್ರೆಸ್ʼ ವೆಬ್ಸೈಟ್ನಲ್ಲಿ ʼMHA renews restriction order on Lawrence Bishnoi for 3rd yearʼ ಎಂಬ ಶೀರ್ಷಿಕೆಯೊಂದಿಗೆ ವರದಿ ಮಾಡಲಾಗಿದೆ. ವರದಿಯಲ್ಲಿ ʼಈ ವರ್ಷದ ಆಗಸ್ಟ್ನಲ್ಲಿ ಗೃಹ ಸಚಿವಾಲಯ (MHA), ಅಹಮದಾಬಾದ್ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಚಲನವಲನವನ್ನು ಮತ್ತೊಂದು ವರ್ಷದವರೆಗೆ ನಿರ್ಬಂಧಿಸುವ ಆದೇಶವನ್ನು ನವೀಕರಿಸಿತು. ಲಾರೆನ್ಸ್ ಬಿಷ್ಣೋಯ್ ವಿರುದ್ಧದ ನಿರ್ಬಂಧಿತ ಆದೇಶವನ್ನು ಬಿಎನ್ಎಸ್ಎಸ್ ಸೆಕ್ಷನ್ 303 ರ ಅಡಿಯಲ್ಲಿ ಗೃಹ ಸಚಿವಾಲಯ ನವೀಕರಿಸಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಜೈಲು ಅಧಿಕಾರಿಯೊಬ್ಬರು ದೃಢಪಡಿಸಿದರು. ನ್ಯಾಯಾಲಯದಲ್ಲಿ ಹಾಜರಾತಿ, ಯಾವುದಾದರೂ ಇದ್ದರೆ, ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ ಎಂದು ವರದಿಯಾಗಿದೆ.
ಫೆಬ್ರವರಿ 24, 2020ರಂದು ʼಆರ್ಬಿ ಲೈವ್ʼ ಯೂಟ್ಯೂಬ್ ಚಾನೆಲ್ನಲ್ಲಿ ʼFazilka की अदालत में Lawrance Bishnoi की पेशी, हुए बरी 24/02/20ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದನ್ನು ಅಪ್ಲೋಡ್ ಮಾಡಲಾಗಿದೆ. ಆರ್ಬಿ ಲೈವ್ ಮೀಡಿಯಾ ಒದಗಿಸಿದ ಮಾಹಿತಿಯ ಪ್ರಕಾರ, ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಬಿ ಲಾರೆನ್ಸ್ ಬಿಷ್ಣೋಯ್ ಅವರನ್ನು ಪಂಜಾಬ್ನ ಫಜಿಲ್ಕಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂಬ ವರದಿಯಾಗಿದೆ
ಫೆಬ್ರವರಿ 24, 2020 ರಂದು ʼನ್ಯೂಸ್ 18 ಪಂಜಾಬ್ʼ ಯೂಟ್ಯೂಬ್ ಚಾನೆಲ್ನಲ್ಲಿ ʼGangster Lawrence Bishnoi Fazilka Courtʼ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ಇದು ಫಜಿಲ್ಕಾ ನ್ಯಾಯಾಲಯದಲ್ಲಿ ಬಿಷ್ಣೋಯ್ ಅವರ ಇದೇ ರೀತಿಯ ದೃಶ್ಯಗಳನ್ನು ಒಳಗೊಂಡಿತ್ತು. ಈ ವರದಿಯ ಪ್ರಕಾರ, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಷ್ಣೋಯ್ ಅವರನ್ನು ನ್ಯಾಯಪೀಠದ ಮುಂದೆ ಹಾಜರುಪಡಿಸಲಾಯಿತು. ಆ ಪ್ರಕರಣದಲ್ಲಿ ಅವರನ್ನು ಖುಲಾಸೆಗೊಳಿಸಲಾಯಿತು; ಆದಾಗ್ಯೂ, ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲೇ ಇದ್ದರು.
ಫೆಬ್ರವರಿ 24, 2020ರಂದು 'ಲಿವಿಂಗ್ ಫಜಿಲ್ಕಾ' ಎಂಬ ಯೂಟ್ಯೂಬ್ ಚಾನೆಲ್ನಲ್ಲಿ ʼफाजिल्का-(दलीप दत्त)-आखिर क्या हुआ आज लॉरेंस बिश्नोई के साथ फाजिल्का की जिला अदालत मेंʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಇದರಿಂದ ಸಾಭೀತಾಗಿದ್ದೇನೆಂದರೆ, ವಿಡಿಯೋ 2020ರದ್ದಾಗಿದ್ದು, ಬಿಷ್ಣೋಯ್ರನ್ನು ಫಜಿಲ್ಕಾದ ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತಿರುವುದನ್ನು ತೋರಿಸುತ್ತದೆ. ಅವರನ್ನು ಇನ್ನೂ ಅಹಮದಾಬಾದ್ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

